ಡಿಕೆ ಶಿವಕುಮಾರ್ ಗೆ ತಿರುಗೇಟು: ಸಿಎಂ ಬದಲಾವಣೆ ವಿಚಾರ ಕುರಿತು ಸಚಿವ ಸಿ.ಪಿ. ಯೋಗೇಶ್ವರ್ ಪ್ರತಿಕ್ರಿಯಿಸಿದ್ದು ಹೀಗೆ.?

ಬೆಂಗಳೂರು,ಜೂನ್,7,2021(www.justkannada.in): ನಮ್ಮ‌ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಇನ್ನು ಎರಡು ವರ್ಷ ಮುಂದುವರಿಯಬೇಕು ಎಂಬುದು ನನ್ನ‌ ಇಚ್ಛೆ. ನನ್ನ ‌ನೋವನ್ನು ಎಲ್ಲಿ ಹೇಳಿಕೊಳ್ಳಬೇಕೋ ಅಲ್ಲಿ ಹೇಳಿಕೊಂಡಿದ್ದೇನೆ.  ಸಣ್ಣಪುಟ್ಟ ಭಿನ್ನಾಭಿಪ್ರಾಯ ಗಳನ್ನು ಬಗೆ ಹರಿಸಿಕೊಳ್ಳುತ್ತೇವೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ತಿಳಿಸಿದ್ದಾರೆ.jk

ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸಿ.ಪಿ ಯೋಗೇಶ್ವರ್, ನಮ್ಮ‌ಪಕ್ಷದ ಯಾವುದೇ ಶಾಸಕರ ಹೇಳಿಕೆಗೆ ನಾನು ಪ್ರತಿಕ್ರಯಿಸುವುದಿಲ್ಲ. ಆದರೆ ಡಿ.ಕೆ. ಶಿವಕುಮಾರ್ ಅವರು ನಮ್ಮ ಪಕ್ಷದ ಸಾಮಾನ್ಯ ಸದಸ್ಯರಾಗಿ ನೋಂದಣಿ ಮಾಡಿಕೊಳ್ಳುವುದು ಸೂಕ್ತ. ಅವರು ನನ್ನ ರಾಜಕೀಯ ವಿರೋಧಿ, ಸಿಡಿ ಸಂಸ್ಕೃತಿ ಅವರಿಗೆ ಚೆನ್ನಾಗಿ ಗೊತ್ತು. ರಮೇಶ್ ಜಾರಕಿಹೊಳಿ ಸಿಡಿ ಹಗರಣದ ಹಿಂದೆ ಯಾರು ಇದ್ದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಡಿ.ಕೆ ಶಿವಕುಮಾರ್ ಗೆ ತಿರುಗೇಟು ನೀಡಿದರು.

ನಾನು ಜೆಎಸ್ಎಸ್‌ ಮಠಕ್ಕೆ ಆದಿ ಚುಂಚನಗಿರಿ ಮಠಕ್ಕೆ ಹೋಗುತ್ತಲೇ ಇರುತ್ತೇನೆ. ನಾನು ಹೋಗಿ ಬಂದ ತಕ್ಷಣ ಅವರು ಹೋಗುತ್ತಾರೆ ಮನಸ್ಸಿಗೆ ಬಂದಂತೆ ಮಾತನಾಡುತ್ತಾರೆ. ತಿಹಾರ್ ಜೈಲಿಗೆ ಹೋಗಿ ಬಂದ ಮೇಲೆ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಕುಮಾರಸ್ವಾಮಿ ಮತ್ತು ಡಿ.ಕೆ. ಶಿವಕುಮಾರ್ ಅವರ ಸಖ್ಯ ಕಿತ್ತುಹಾಕಿ ಬಿಜೆಪಿ ಸರ್ಕಾರ ತಂದಿದ್ದೇವೆ ಎಂದು ಸಿ.ಪಿ ಯೋಗೇಶ್ವರ್ ಲೇವಡಿ ಮಾಡಿದರು.

Key words: KPCC president-DK Shivakumar-minister-cp Yogeshwar.