Tuesday, October 13, 2026

Dasara Wishes

Court DasraWishes_JK DasraWishes JK
Happy Dasara
Home Front Page ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಕೊಲ್ಲೂರು ಮೂಕಾಂಬಿಕಾ ದರ್ಶನ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು, ನವೆಂಬರ್ 29, 2020 (www.justkannada.in): ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರವಾಸಕ್ಕೂ ಮುನ್ನ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮತ್ತು ಕಮಲಶಿಲೆ ಬ್ರಾಹ್ಮಿ ದುರ್ಗಾಪರಮೇಶ್ವರಿ ದೇವರ ದರ್ಶನ ಪಡೆದರು.

ಡಿಕೆಶಿ ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ಪೂಜೆಯಲ್ಲಿ ಪಾಲ್ಗೊಂಡರು. ನಂತರ ಅನ್ನ ಪ್ರಸಾದ ಸೇವಿಸಿ ಬಳಿಕ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿದರು.

ಶನಿವಾರ ರಾತ್ರಿ ಕೊಲ್ಲೂರಿನಲ್ಲೇ ತಂಗಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇಂದು ಬೆಳಿಗ್ಗೆ ಮೂಕಾಂಬಿಕಾ ದೇವಿ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಭಾಗಿಯಾದರು.

ಇಂದು ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಬಳಿಕ ಡಿಸಿಸಿ ಕಚೇರಿಯಲ್ಲೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಮಹತ್ವದ ಸಮಾಲೋಚನೆ ನಡೆಸಲಿದ್ದಾರೆ.