ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ: ಅಂತಾರಾಷ್ಟ್ರೀಯ ಬುಕ್ಕಿ ವಿಚಾರಣೆ

ಬೆಂಗಳೂರು, ಜನವರಿ 07, 2019 (www.justkannada.in): ಕರ್ನಾಟಕ ಪ್ರೀಮಿಯರ್‌ ಲೀಗ್‌ (ಕೆಪಿಎಲ್‌) 2019ರ ಆವೃತ್ತಿಯ ಮ್ಯಾಚ್‌ ಫಿಕ್ಸಿಂಗ್‌, ಬೆಟ್ಟಿಂಗ್‌ ಪ್ರಕರಣದಲ್ಲಿ ಭಾಗಿಯಾಗಿರುವ ಅಂತಾರಾಷ್ಟ್ರೀಯ ಬುಕ್ಕಿ ಜತಿನ್‌ ಎಂಬಾತನನ್ನು ಸಿಸಿಬಿ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ಸಿಸಿಬಿ ಡಿಸಿಪಿ ಕುಲದೀಪ್‌ ಜೈನ್‌ ನೇತೃತ್ವದ ತನಿಖಾ ತಂಡ, ಕಳೆದ ಎರಡು ದಿನಗಳಿಂದ ಬುಕ್ಕಿ ಜತಿನ್‌ನನ್ನು ತೀವ್ರ ವಿಚಾರಣೆ ನಡೆಸಿ ಇಡೀ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದೆ.

ಸಿಸಿಬಿ ಕಚೇರಿಯಲ್ಲಿ ತನಿಖಾ ತಂಡ ಸೋಮವಾರ ಎಂಟು ಗಂಟೆಗಳ ಕಾಲ ಜತೀನ್‌ನನ್ನು ತೀವ್ರ ವಿಚಾರಣೆ ನಡೆಸಿದ್ದು ಹೇಳಿಕೆ ದಾಖಲಿಸಿಕೊಂಡಿದೆ. ಹೆಚ್ಚಿನ ವಿಚಾರಣೆಗಾಗಿ ಮಂಗಳವಾರ ಕೂಡ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.