KPSC ಫಲಿತಾಂಶ ಅಕ್ರಮ ಆರೋಪ: ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ- ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,4,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಮುಖ್ಯ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು ಇದರಲ್ಲಿ ಅಕ್ರಮಗಳು ನಡೆದಿದೆ ಎಂಬ ಅಪಸ್ವರ, ಆರೋಪ ಕೇಳಿ ಬಂದಿದೆ. ಈ ವಿಚಾರವನ್ನ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ  ಶುಕ್ರವಾರ ಬಜೆಟ್ ಅಧಿವೇಶನ ಆರಂಭವಾಗಲಿದೆ.  ಕೆಪಿಎಸ್ ಸಿ  ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ಆರೋಪ ಸೇರಿ ಎಲ್ಲವನ್ನು ಪ್ರಸ್ತಾಪಿಸುತ್ತೇವೆ ಅಧೀವೇಶನ ಪ್ರಾರಂಭವಾಗತ್ತಿದ್ದಂತೆ ಪ್ರತಿಭಟನೆ ಮಾಡುತ್ತೇವೆ ಎಂದಿದ್ದಾರೆ.

ವೇತನದ ಬಾಕಿ ವೈದ್ಯರ ಮುಷ್ಕರ ಹೀಗೆ ಎಲ್ಲವನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ. ಪ್ರಸ್ತುತ ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿರುವುದು ವಾಸ್ತವಿಕ ಸತ್ಯ ಎಂದು ಸರ್ಕಾರಕ್ಕೆ  ಬಿವೈ ವಿಜಯೇಂದ್ರ ಕುಟುಕಿದ್ದಾರೆ.

Key words: KPSC, result, allegations, budget session, BY Vijayendra