ಬೆಂಗಳೂರು,ಸೆಪ್ಟಂಬರ್,22,2026 (www.justkannada.in): ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ದಲ್ಲಿನ ಅಕ್ರಮ ಕುರಿತು ಕಳವಳ ವ್ಯಕ್ತಪಡಿಸಿರುವ ಸಿಎಂ ಡಿಕೆ ಶಿವಕುಮಾರ್ , ಕೆಪಿಎಸ್ ಸಿ ಮುಚ್ಚುವ ಬಗ್ಗೆ ಕಾನೂನಾತ್ಮಕವಾಗಿ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ಕೆಪಿಎಸ್ ಸಿ ಮೇಲೆ ನಂಬಿಕೆಯಿಂದ ನೇಮಕ ಮಾಡಿರುತ್ತೇವೆ ಪದೇ ಪದೆ ಅಕ್ರಮ ನಡೆದಾಗ ಮಕ್ಕಳ ಭವಿಷ್ಯಕ್ಕೆ ಸಮಸ್ಯೆ ಆಗುತ್ತದೆ. ಹೀಗಾಗಿ ಕೆಪಿಎಸ್ ಸಿ ಮುಚ್ಚುವ ಬಗ್ಗೆ ಚಿಂತನೆ ಮಾಡಿದ್ದೇವೆ ಎಂದರು.
ಪಶುವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಸಂಬಂಧ ಪೊಲೀಸ್ ತನಿಖೆ ಈಗಾಗಲೇ ನಡೆಯುತ್ತಿದೆ. ಅಕ್ರಮದಲ್ಲಿ ಶಾಮೀಲಾದ ಹಲವರನ್ನು ಈಗಾಗಲೇ ಗುರುತಿಸಲಾಗಿದೆ. ಪ್ರಕರಣದ ತನಿಖೆಗೆ ಎಸ್ಐಟಿ ರಚನೆಗೆ ಆಕ್ಷೇಪವಿಲ್ಲ ಎಂದರು.
ಹಿಂದೆ ವಿದ್ಯುತ್ ಸಚಿವರಾಗಿದ್ದಾಗ ಪಾರದರ್ಶಕ ನೇಮಕಾತಿ ನಡೆಸಿದ್ದನ್ನು ಅವರು ಸ್ಮರಿಸಿದರು. ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಸರಕಾರ ಬದ್ಧವಾಗಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಭರವಸೆ ನೀಡಿದರು.
Key words: thought, Closing, KPSC, CM DK Shivakumar







