ಕೆಪಿಟಿಸಿಎಲ್ ಕಿರಿಯ ಸಹಾಯಕ ಪರೀಕ್ಷಾ ಅಕ್ರಮ ಪ್ರಕರಣ: ಮತ್ತೆ ನಾಲ್ವರ ಬಂಧನ.

ಬೆಳಗಾವಿ, ನವೆಂಬರ್,16,2022(www.justkannada.in): ಕೆಪಿಟಿಸಿಎಲ್ ಕಿರಿಯ ಸಹಾಯಕ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ  ಮತ್ತೆ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ.

ಮಂಜುನಾಥ್ ರಾಮಪ್ಪ, ಪುಂಡಲಿಕ ಫಕೀರಪ್ಪ, ಬನಜ , ಮಹದೇವ ದಾಸನಾಳ   ಬಂಧಿತ ಆರೋಪಿಗಳು. ಪರಿಕ್ಷೆ ಅಕ್ರಮದಲ್ಲಿ ಬಂಧಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.

ಖಚಿತ ಮಾಹಿತಿ ಮೇರೆಗೆ ಗೋಕಾಕ್ ಮತ್ತು ಶಹರ ಠಾಣಾ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನ ಬಂಧಿಸಿದ್ದಾರೆ.  ಬಂಧಿತರು ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಬಳಸಿ ಪರೀಕ್ಷೆ ಬರೆದಿದ್ದರು ಎನ್ನಲಾಗಿದೆ.

Key words: KPTCL- Junior Assistant- Examination- Illegal Case-Four – arrested