ಮೈಸೂರು ಜುಲೈ,16,2025 (www.justkannada.in): ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ ಎಚ್. ಕೃಷ್ಣ ಅವರು ಇಂದು ಕೆ.ಆರ್.ಆಸ್ಪೆತ್ರೆಗೆ ಭೇಟಿ ನೀಡಿ ಅಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಚೆಲುವಾಂಬ ಆಸ್ಪತ್ರೆಗೆ ಭೇಟಿ ನೀಡಿ ತಾಯಿ ಹಾಗೂ ಮಕ್ಕಳಿಗೆ ನೀಡುವ ಆಹಾರ ಗುಣಮಟ್ಟ ಪರಿಶೀಲನೆ ಮಾಡಿದರು. ಊಟದ ಮೆನು, ಗುಣಮಟ್ಟ ಹಾಗೂ ಮೂಲ ಸೌಕರ್ಯಗಳ ಬಗ್ಗೆ ಪರಿಶೀಲಿಸಿದರು. ಹಾಗೆಯೇ ಆಸ್ಪತ್ರೆಯ ಶೌಚಾಲಯ, ಸ್ನಾನದ ಕೊಠಡಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಈ ವೇಳೆ ಆಹಾರ ಮತ್ತು ನಾಗರಿಕ ಪೂರೈಕೆ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಮೈಸೂರು ಮೆಡಿಕಲ್ ಕಾಲೇಜು ಡೀನ್ ಹಾಗೂ ನಿರ್ದೇಶಕರಾದ ದಾಕ್ಷಾಯಿಣಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
Key words: Karnataka State Food Commission, Chairman, visits, KR Hospital, Mysore