ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರಶಸ್ತಿ ಪ್ರದಾನ.

ಮೈಸೂರು,ಆಗಸ್ಟ್,31,2021(www.justkannada.in): ಮೈಸೂರು ಕನ್ನಡ ವೇದಿಕೆ ವತಿಯಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತೋತ್ಸವ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.

ನಗರದ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರು ಸಂಗೊಳ್ಳಿ ರಾಯಣ್ಣ  ಪ್ರತಿಮೆಗೆ ಪುಷ್ಪಾರ್ಚನೆ  ನೆರವೇರಿಸಿದರು. ಬಳಿಕ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಯಶಟೆಲ್ ಟಿವಿ ಪ್ರಧಾನ ಸಂಪಾದಕಿ ಸಾಹಿತ್ಯ ಯಜಮಾನ್. ಖಾಸಗಿ ಚಾನಲ್ ವರದಿಗಾರ ಲೋಹಿತ್ ಹನುಮಂತಪ್ಪ ಸೇರಿದ ಸಾಧಕರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಸಾಹಿತಿ ಬನ್ನೂರು ಕೆ ರಾಜು, ಮೈಸೂರು ಕನ್ನಡ ವೇದಿಕೆ ಅಧ್ಯಕ್ಷ ಬಾಲಕೃಷ್ಣ , ಸಮಾಜ ಸೇವಕ ರಘುರಾಮ್ ವಾಜಪೇಯಿ ಸೇರಿದಂತೆ ಹಲವರ ಉಪಸ್ಥಿತರಿದ್ದರು.

Key words: Kranthiweera Sangolirayanna -Award -Achievement -various fields-mysore