ಬೆಂಗಳೂರು,ಅಕ್ಟೋಬರ್,25,2025 (www.justkannada.in): ಹೈಕಮಾಂಡ್ ಹೇಳಿದರೆ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದ ಎಂದು ಹೇಳುವ ಮೂಲಕ ಕಂದಾಯ ಸಚಿವ ಕೃಷ್ಣಭೈರೇಗೌಡ ಸಚಿವ ಸಂಪುಟ ಪುನರಚನೆಯ ಸುಳಿವು ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೃಷ್ಣ ಭೈರೇಗೌಡ, ಸಂಪುಟ ಪುನರಚನೆ ಸರ್ಕಾರ ಅಧಿಕಾರಕ್ಕೆ ಬಂದಾಗಲೇ ತೀರ್ಮಾನ ಆಗಿತ್ತು. ಅರ್ಹತೆ ಇರುವವರಿಗೆ ಸಚಿವ ಸ್ಥಾನ ನೀಡಬೇಕು. ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್ ಹೇಳಿದರೇ ಸಚಿವ ಸ್ಥಾನ ತ್ಯಾಗ ಮಾಡಲು ಸಿದ್ದ ಎಂದರು.
ನಾಯಕತ್ವ ಬದಲಾವಣೆಗೂ ಸಂಪುಟ ಪುನರಚನೆಗೂ ಸಂಬಂಧವಿಲ್ಲ. ಸಚಿವ ಸ್ಥಾನದಿಂದ ಕ್ಷೇತ್ರದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ. ಅವಕಾಶ ವಿಷಯದಲ್ಲಿ ನನಗೆ ಹೊಟ್ಟೆ ತುಂಬಿದೆ. ಕೆಲಸದಲ್ಲಿ ಅಲ್ಲ. ಅವಕಾಶ ವಿಚಾರದಲ್ಲಿ ನನಗೆ ಸಂತೃಪ್ತಿ ಇದೆ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದರು.
Key words: ministerial position, high command, Minister, Krishna Bhairegowda







