ಡಿಸೆಂಬರ್ 13ರಂದು ಸುಪ್ರೀಂಕೋರ್ಟ್ ನಲ್ಲಿ ಕೃಷ್ಣಾ ಜಲವಿವಾದ ವಿಚಾರಣೆ:

ನವದೆಹಲಿ,ನವೆಂಬರ್,29,2021(www.justkannada.in):  ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣದ 30.12.2010ರ ಮತ್ತು 29.11.2013ರ ಅಂತಿಮ ಐತೀರ್ಪುಗಳನ್ನು ಕೇಂದ್ರ ಸರ್ಕಾರದ ಅಧಿಕೃತ ಗೆಜೆಟ್ ನಲ್ಲಿ  ತಕ್ಷಣ ಪ್ರಕಟಿಸಬೇಕೆಂದು ಕರ್ನಾಟಕ ಮಹಾರಾಷ್ಟ್ರ ಸರ್ಕಾರಗಳು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ವಿಚಾರಣೆ ನಡೆಸಿದ ಸರ್ವೋಚ್ಛ ನ್ಯಾಯಾಲಯದ ದ್ವಿಸದಸ್ಯ ಪೀಠ ಡಿಸೆಂಬರ್ 13 ರಂದು ವಿಸ್ತೃತ ವಿಚಾರಣೆಗೆ ಈ ಪ್ರಕರಣವನ್ನು ಪಟ್ಟಿ ಮಾಡಬೇಕೆಂದು ಸೂಚಿಸಿತು.

ಕೇಂದ್ರ ಸರ್ಕಾರದ ಹಿರಿಯ ನ್ಯಾಯವಾದಿ ವಾಸೀಂ ಎ. ಖಾದ್ರಿ ಅವರು ಈ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಸಲ್ಲಿಸುವ ಪ್ರಕ್ರಿಯೆ ಕೇಂದ್ರ ಸರ್ಕಾರದ ಉನ್ನತ ಹಂತದಲ್ಲಿ ವಿಲೇವಾರಿ ಕುರಿತು ಪರಿಶೀಲನೆಯಲ್ಲಿರುವುದರಿಂದ ಎರಡು ವಾರಗಳ ಹೆಚ್ಚಿನ ಕಾಲಾವಕಾಶ ಅಗತ್ಯವಿದೆ ಎಂದು ಕೋರಿದ ಹಿನ್ನೆಲೆಯಲ್ಲಿ ಕರ್ನಾಟಕದ ವಾದವನ್ನು ಆಲಿಸಿದ ನಂತರ ಡಿಸೆಂಬರ್ 13ರಂದು ವಿಚಾರಣೆಗೆ ಕಲಾಪದ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಆದೇಶಿಸಿತು.

ಕರ್ನಾಟಕದ ಪರವಾಗಿ ವಿಸ್ತೃತವಾದ ವಾದ ಮಂಡಿಸಿದ ನ್ಯಾಯವಾದಿ ಶ್ಯಾಂ ದಿವಾನ್ ಕೇಂದ್ರ ಸರ್ಕಾರವು ನ್ಯಾಯಾಧಿಕರಣದ ಆದೇಶಗಳನ್ನು ಗೆಜೆಟ್ ನಲ್ಲಿ ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯವು ದಿನಾಂಕ:16.09.2011ರಂದು ನೀಡಿದ ತಡೆಯಾಜ್ಞೆ ಅಡ್ಡಿ ಯುಂಟುಮಾಡುತ್ತಿದೆ. ಆದರೆ ಅಂತರರಾಜ್ಯ ಜಲವಿವಾದ ಕಾಯಿದೆಯ ಕಲಂ6ರ ಅಡಿಯಲ್ಲಿ ನ್ಯಾಯಾಧಿಕರಣದ ಐತೀರ್ಪುಗಳು ಸರ್ವೋಚ್ಛ ನ್ಯಾಯಾಲಯದ ಡಿಕ್ರಿಗೆ ಸಮಾನವಾಗಿದ್ದು ತಕ್ಷಣ ಅವುಗಳನ್ನು ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕಾನೂನಿನಲ್ಲಿ ಅವಕಾಶ ಕಲ್ಪಿಸಲಾಗಿದೆ. ಕಾವೇರಿ ನ್ಯಾಯಾಧಿಕರಣದ ಐತೀರ್ಪನ್ನು ಪ್ರಕಟಿಸಲು ಸರ್ವೋಚ್ಛ ನ್ಯಾಯಾಲಯ ನಿರ್ದೇಶನ ನೀಡಿದಂತೆ ಈ ಪ್ರಕರಣದಲ್ಲೂ ನಿರ್ದೇಶನ ನೀಡಿ ಗೆಜೆಟ್ ಪ್ರಕಟಣೆಗೆ ಅವಕಾಶ ಕಲ್ಪಿಸಬೇಕೆಂದು ಸರ್ವೋಚ್ಛ ನ್ಯಾಯಾಲಯವನ್ನು ಪ್ರಾರ್ಥಿಸಿದರು.

ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 (ಬ್ರಿಜೇಶ್ ಕುಮಾರ್ ಆಯೋಗ) ಐತೀರ್ಪು 2050ವರೆಗೆ ಜಾರಿಯಲ್ಲಿ ಇರುತ್ತದೆ. ಈಗಾಗಲೇ 10 ಅಮೂಲ್ಯ ವರ್ಷಗಳನ್ನು ನಾವು ಕಳೆದುಕೊಂಡಿದ್ದೇವೆ. 1205 ಕಿ.ಮೀ. ಉದ್ದದ ಕಾಲುವೆ ಜಾಲವನ್ನು ನಿರ್ಮಾಣ ಮಾಡಿದ್ದು, 13321 ಕೋಟಿ ರೂಪಾಯಿಗಳನ್ನು ವ್ಯಯಿಸಲಾಗಿದೆ. ಆದರೆ ನೀರು ಮಾತ್ರ ವ್ಯರ್ಥವಾಗಿ ಬಂಗಾಳ ಕೊಲ್ಲಿ ಸಾಗರವನ್ನು ಸೇರುತ್ತಿದೆ. ರೈತರು ಕಾಲುವೆಗಳಿಗೆ ನೀರು ಒದಗಿಸುವಂತೆ ಚಳುವಳಿ ಮಾಡುತ್ತಿದ್ದಾರೆ ಎಂದು ಸಮರ್ಥವಾಗಿ ವಾದ ಮಂಡಿಸಿದರು. ತೆಲಂಗಾಣದ ನ್ಯಾಯವಾದಿ ಸಿ.ಎಸ್.ವೈದ್ಯನಾಥನ್ ಅವರು ಈ ಪ್ರಕರಣದಲ್ಲಿ ವಿವರವಾದ ವಾದ ಮಂಡನೆಗೆ ಅವಕಾಶ ಕೋರಿದರು. 4 ರಾಜ್ಯಗಳು ತಮ್ಮ ವಾದ ಪ್ರತಿವಾದಗಳ ಪ್ರಮುಖ ಅಂಶಗಳನ್ನು ಒಳಗೊಂಡ ಮೂರು ಪುಟದ ಟಿಪ್ಪಣಿಯನ್ನು ವಿಚಾರಣೆಗೆ 48 ಗಂಟೆಗಳಿಗೂ ಮುನ್ನ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು  ಸೂಚಿಸಿ ಡಿಸೆಂಬರ್ 13ರಂದು ಮಧ್ಯಾಹ್ನ 2.00 ಗಂಟೆಗೆ ಪ್ರಕರಣದ ವಿಚಾರಣೆಗೆ ನಿಗದಿಪಡಿಸಿದರು.

Key words: Krishna water dispute- hearing – 13 December-supreme court

ENGLISH SUMMARY…

Hearing on Krishna River water dispute in SC on Dec. 13
New Delhi, November 29, 2021 (www.justkannada.in): The two-member bench of the Hon’ble Supreme Court of India, which heard the arguments of Karnataka and Maharasthra states’ regarding the appeals made by both the states to publish the judgments of the Krishna Water Tribunal dated 30.12.2010 and 29.11.2013 in the official gazette, today instructed to list the case for a detailed hearing on December 13.
Following an appeal made by the Union Government’s senior advocate Wasim A. Khadri to give two weeks, as the process of the Govt. of India’s response, in this case, is still under verification at the higher level, the Hon’ble Supreme Court which heard the arguments of Karnataka State instructed to list it for hearing on December 13.
Keywords: Krishna River water dispute/ Hon’ble Supreme Court/ hearing/ December 13