ಮೈಸೂರು, ಜೂನ್,11,2026 (www.justkannada.in): ಬೇಸಿಗೆ ಮುಗಿದು ಮಳೆಗಾಲ ಆರಂಭವಾಗಿದ್ದರೂ ಸರಿಯಾಗಿ ವರುಣನ ಕೃಪೆ ತೋರದೆ ಇರುವ ಹಿನ್ನೆಲೆಯಲ್ಲಿ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಾರಿ ಜೂನ್ ಅರ್ಧ ತಿಂಗಳು ಕಳೆಯುತ್ತಿದ್ದರೂ ಸರಿಯಾಗಿ ಮಳೆಯಾಗುತ್ತಿಲ್ಲ ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಅಭಾವ ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 81 ಅಡಿಗೆ ಕುಸಿದಿದೆ. ಕೆಆರ್ ಎಸ್ ಜಲಾಶಯ 124 ಅಡಿ ನೀರಿನ ಸಂಗ್ರಹ ಸಾಮರ್ಥ್ಯ ಹೊಂದಿದೆ. 
ಕೆಆರ್ಎಸ್ ಜಲಾಶಯದಲ್ಲಿ ಕೇವಲ 11 ಟಿಎಂಸಿ ಮಾತ್ರ ನೀರು ಸಂಗ್ರಹವಾಗಿದ್ದು, ಇದರಲ್ಲಿ 4 ರಿಂದ 5 ಟಿಎಂಸಿ ನೀರು ಡೆಡ್ ಸ್ಟೋರೇಜ್ ಆಗಿದೆ, ಬಳಕೆಗೆ ಲಭ್ಯವಿರುವುದು ಕೇವಲ 7 ಟಿಎಂಸಿ ಮಾತ್ರವಿದೆ. ಹೀಗಾಗಿ ಬೆಂಗಳೂರು, ಮೈಸೂರು ಮತ್ತು ಮಂಡ್ಯ ಭಾಗಗಳಿಗೆ ಕುಡಿಯುವ ನೀರಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ಈ ನಡುವೆಯೂ ಜೂನ್ ತಿಂಗಳಿನಲ್ಲಿ ತಮಿಳುನಾಡಿಗೆ ಸುಪ್ರೀಂಕೋರ್ಟ್ ಆದೇಶದಂತೆ ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕಾದ ಅನಿವಾರ್ಯತೆ ಇದೆ.
Key words: KRS, water level, drops, 81 feet






