Thursday, August 13, 2026

BDA Apartments

Home Front Page ಶಿಗ್ಗಾಂವಿ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್?

ಶಿಗ್ಗಾಂವಿ ಉಪಚುನಾವಣೆಗೆ ಸ್ಪರ್ಧಿಸುತ್ತಾರಾ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್?

ಶಿವಮೊಗ್ಗ,ಆಗಸ್ಟ್,16,2024 (www.justkannada.in): ಲೋಕಸಭಾ ಚುನಾವಣೆಯಲ್ಲಿ ತನ್ನ ಪುತ್ರ ಕಾಂತೇಶ್ ಗೆ ಹಾವೇರಿ ಕ್ಷೇತ್ರದ ಬಿಜೆಪಿ ಟಿಕೆಟ್  ಕೈತಪ್ಪಿದ್ದಕ್ಕೆ ಅಸಮಾಧಾನಗೊಂಡು ಶಿವಮೊಗ್ಗ ಕ್ಷೇತ್ರದಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತ  ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ಶಿಗ್ಗಾಂವಿ ಉಪಚುನಾವಣೆಯಲ್ಲಿ ತಮ್ಮ ಪುತ್ರನನ್ನ ಕಣಕ್ಕಿಳಿಸುತ್ತಾರೆಯೇ ಎಂಬ ಕುತೂಹಲ ಮೂಡಿದ್ದು ಇದಕ್ಕೆ ಅವರೇ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ, ಶಿಗ್ಗಾವಿ ಉಪಚುನಾವಣೆಗೆ ನನ್ನ ಪುತ್ರ ಕಾಂತೇಶ್ ಸ್ಪರ್ಧೆ ಮಾಡಲ್ಲ. ಕಾಂತೇಶ್ ಗೆ ಹಾವೇರಿ ಲೋಕಸಭೆ ಟಿಕೆಟ್ ಕೊಡುತ್ತೇವೆ ಎಂದರು. ಆದರೆ ನನ್ನ ಪುತ್ರನಿಗೆ ಟಿಕೆಟ್ ಕೊಡದೆ ಮೋಸ ಮಾಡಿದರು. ಹಾವೇರಿ ಜನ ಮನೆಗೆ ಬಂದು ನಿಮಗೆ ಮೋಸ ಆಯ್ತು ಅಂತಿದ್ದಾರೆ. ಆದರೆ ಈಗ ಉಪಚುನಾವಣೆಗೆ ಮಗ ಸ್ಪರ್ಧೆ ಮಾಡಲ್ಲ ಎಂದು ತಿಳಿಸಿದರು.

ಕಾಲಚಕ್ರ ಎನ್ನುವುದು ತಿರುಗುತ್ತಿರುತ್ತದೆ. ಕಾಲ ಹೀಗೆ ಇರುವುದಿಲ್ಲ. ಮೋಸ ಮಾಡಿದವರು ಅನುಭವಿಸುತ್ತಾರೆ ಎಂದು ಕೆಎಸ್ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

Key words: KS Eshwarappa, son, Kantesh, Shiggamvi, by-election