ಅಮೇಜಾನ್ ಪ್ರೈಮ್’ಗೆ ಬಂದ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’

ಬೆಂಗಳೂರು, ಜುಲೈ 26, 2022 (www.justkannada.in): ನಟ ದಿಗಂತ್ ನಟನೆಯ ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಪ್ರಸಾರವಾಗಿದೆ.

ದಿಗಂತ್ ಈ ಚಿತ್ರದಲ್ಲಿ ಹಳ್ಳಿಯಲ್ಲಿ ಬಾಳುವ ಮಧ್ಯಮ ವರ್ಗದ ಯುವಕನಾಗಿ ಕಾಣಿಸಿಕೊಂಡಿದ್ದಾರೆ. ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ’ ಸಿನಿಮಾ ಏಪ್ರಿಲ್ 29ರಂದು ತೆರೆಗೆ ಬಂದಿತ್ತು.

ಚಿತ್ರವನ್ನು ಚಿತ್ರಮಂದಿರದಲ್ಲಿ ನೋಡಲು ಸಾಧ್ಯವಾಗಿಲ್ಲ. ಅಂತಹವರು ಈಗ ಅಮೇಜಾನ್ ಪ್ರೈಮ್ ವಿಡಿಯೋದಲ್ಲಿ ಸಿನಿಮಾ ವೀಕ್ಷಿಸಬಹುದಾಗಿದೆ.

ಉಪ್ಪಿ ಎಂಟರ್​ಟೇನರ್​ ಬ್ಯಾನರ್​ ಅಡಿಯಲ್ಲಿ ಸಿಲ್ಕ್​ ಮಂಜು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ವಿನಾಯಕ್​ ಕೋಡ್ಸರ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು.