ಮೈಸೂರು,ಮಾರ್ಚ್,26,2026 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಶಿಬಿರದಲ್ಲಿ ನಾಳೆ ವಿಶೇಷ ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮ ನಡೆಯಲಿದೆ.
ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಹಾಲಿ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜಿನಿಯರ್ 2025ನೇ ಸಾಲಿನ ಯುಪಿಎಸ್‌ಸಿ ಪರೀಕ್ಷೆಯಲ್ಲಿ 52ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆ, ಚಿಕ್ಕೋಡಿ ತಾಲ್ಲೂಕಿನ ಹತ್ತರವಾಡದ ಕಿರಣ್ ಕಾಮ್ಟೆ ಅವರು ನಾಳೆ ಶುಕ್ರವಾರ ಕರಾಮುವಿ ಕಾವೇರಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಗೆ ವಿಶೇಷ ಉಪನ್ಯಾಸ ನೀಡುವರು.
ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ.ಎಸ್.ಕೆ ನವೀನ್ ಕುಮಾರ್ ಉಪಸ್ಥಿತರಿರುವರು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.
Key words: KSOU, Special lecture, IAS, Kiran Komte







