KSOU: ಅ.29 ರಂದು 50 ದಿನಗಳ ‘ತರಬೇತಿ ಶಿಬಿರ’ ಉದ್ಘಾಟನೆ

ಮೈಸೂರು,ಅಕ್ಟೋಬರ್,24,2025 (www.justkannada.in): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ‘ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ’ವು ದಿನಾಂಕ:29.10.2025ರ ಬೆಳಿಗ್ಗೆ 11:30 ಗಂಟೆಗೆ ಕಾವೇರಿ ಸಭಾಂಗಣದಲ್ಲಿ 50 ದಿನಗಳ ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಹುದ್ದೆಗಳ ನೇಮಕಾತಿ ಪರೀಕ್ಷೆಗಳ ತರಬೇತಿ ಶಿಬಿರ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಿದೆ.

ಹಿರಿಯ ನಿವೃತ್ತ ಐಪಿಎಸ್ ಅಧಿಕಾರಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಮತ್ತು ಮಹಾ ನಿರೀಕ್ಷಕ ಶಂಕರ್ ಬಿದರಿ ತರಬೇತಿ ಶಿಬಿರವನ್ನ ಉದ್ಘಾಟನೆ ಮಾಡುವರು. ಮುಖ್ಯ ಅತಿಥಿಯಾಗಿ ಮೈಸೂರು ನಗರ ಪೊಲೀಸ್ ಉಪ ಆಯುಕ್ತರಾದ ಆ‌ರ್.ಎನ್.ಬಿಂದುಮಣಿ ಮುಖ್ಯ ಭಾಷಣ ಮಾಡುವರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಅಧ್ಯಕ್ಷತೆ ವಹಿಸುವರು. ಕುಲಸಚಿವ ಪ್ರೊ. ಎಸ್.ಕೆ ನವೀನ್‌ಕುಮಾರ್ ಉಪಸ್ಥಿತರಿರುವರು. ಈಗಲೂ ತರಬೇತಿಗೆ ಪ್ರವೇಶಾತಿ ಪಡೆಯಲು ಅವಕಾಶವಿದೆ. ಹೆಚ್ಚಿನ ವಿವರಗಳಿಗೆ 0821-2515944/9964760090 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಎಂದು ಕೇಂದ್ರದ ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ತಿಳಿಸಿದ್ದಾರೆ.

Key words: KSOU, Inauguration, 50 days, training camp