Monday, October 12, 2026

Dasara Wishes

BJP DasraWishes_JK DasraWishes JK
Happy Dasara
Home Crime ಕೆ.ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಗಳ ನಡುವೆ ಡಿಕ್ಕಿ: 15 ದಿನಗಳ ಹಿಂದಷ್ಟೆ...

ಕೆ.ಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಗಳ ನಡುವೆ ಡಿಕ್ಕಿ: 15 ದಿನಗಳ ಹಿಂದಷ್ಟೆ ಮದುವೆಯಾಗಿದ್ದ ನವವಿವಾಹಿತೆ ಸೇರಿ ಇಬ್ಬರು ದುರ್ಮರಣ….

ಚಾಮರಾಜನಗರ,ಡಿ,4,2019(www.justkannada.in): ಕೆಎಸ್ ಆರ್ ಟಿಸಿ ಬಸ್ ಮತ್ತು ಬೈಕ್ ಗಳ ನಡುವೆ ಡಿಕ್ಕಿಯಾಗಿ ನವವಿವಾಹಿತೆ ಸೇರಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

ಚಾಮರಾಜನಗರದ ಗುಂಡ್ಲುಪೇಟೆಯಲ್ಲಿ ಈ ಘಟನೆ ನಡೆದಿದೆ. ಕಾವ್ಯ(20) ಮತ್ತು ಮತ್ತೊಂದು ಬೈಕ್ ನಲ್ಲಿದ್ದ ಮಹೇಶ್ (30) ಮೃತಪಟ್ಟವರು. ಮಹೇಶ್ ಮಲ್ಲನಗೊಳಿ ಗ್ರಾಮದವರಾಗಿದ್ದಾರೆ. ಕಾವ್ಯ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡಗಳ್ಳಿ ಗ್ರಾಮದವರಾಗಿದ್ದಾರೆ. ಇನ್ನು ಕಾವ್ಯ ಪತಿ ರಾಜಕುಮಾರ(28) ಅವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾವ್ಯ ಪತಿ ರಾಜಕುಮಾರ್ ಜತೆ ಬೆಂಡಗಳ್ಳಿಯಲ್ಲಿ ಬೀಗರ ಔತಣ ಮುಗಿಸಿ ಬೈಕ್ ನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಕೆ.ಎಸ್ ಆರ್ ಟಿಸಿ ಬಸ್ ಮತ್ತು ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ. ಕಾವ್ಯ ಮತ್ತು ಮತ್ತೊಂದು ಬೈಕ್ ನಲ್ಲಿದ್ದ ಮಹೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಸ್ಥಳಕ್ಕೆ ಗುಂಡ್ಲುಪೇಟೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Key words: KSRTC bus-bike -collides –two death-chamarajanagar