ಕೆಎಸ್ ಆರ್ ಟಿಸಿ ಬಸ್ ಚಾಲಕ ಆತ್ಮಹತ್ಯೆಗೆ ಯತ್ನ ಕೇಸ್ ತನಿಖೆ : ಗೃಹ ಸಚಿವ ಪರಮೇಶ್ವರ್ ಘೋಷಣೆ.

ಬೆಂಗಳೂರು,ಜುಲೈ,6,2023(www.justkannada.in): ಕೆಎಸ್ ಆರ್ ಟಿಸಿ ಬಸ್ ಚಾಲಕ ಜಗದೀಶ್  ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಕುರಿತು ತನಿಖೆಗೆ ರಾಜ್ಯ ಸರ್ಕಾರ ಮುಂದಾಗಿದೆ.

ಈ ಕುರಿತು ಸದನದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಘೋಷಣೆ ಮಾಡಿದ್ದಾರೆ. ಪ್ರಕರಣ ಕುರಿತು ನಿಷ್ಪಕ್ಷಪಾತವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣ ಇಂದು ವಿಧಾನಮಂಡಲ ಉಭಯಸದನದಲ್ಲೂ ಪ್ರತಿಧ್ವನಿಸಿತು. ಈ ಕುರಿತು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜೆಡಿಎಸ್ ಮತ್ತು ಬಿಜೆಪಿ ಸದಸ್ಯರು ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿದರು.

ಈ ಕೇಸ್ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಸತ್ಯ ಹೊರಗೆ ಬರಲಿ. ಸರ್ಕಾರಿ ಬಸ್ ಚಾಲಕನ ಕುಟುಂಬಕ್ಕೆ ನ್ಯಾಯ, ರಕ್ಷಣೆ ಕೊಡಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸದನದಲ್ಲಿ ಒತ್ತಾಯಿಸಿದರು.

Key words: KSRTC- bus driver- attempted –suicide- case – investigate