ಒಕ್ಕಲಿಗರು ಕುಮಾರಸ್ವಾಮಿ ಒಬ್ಬರನ್ನೇ ಫಾಲೋ ಮಾಡುವುದಿಲ್ಲ : ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು,ಅಕ್ಟೋಬರ್,11,2020(www.justkannada.in) :  ಯಾರು ಯಾವ ಜಾತಿಯನ್ನು ಗುತ್ತಿಗೆ ತೆಗೆದುಕೊಂಡಿಲ್ಲ. ಒಕ್ಕಲಿಗರು ಕುಮಾರಸ್ವಾಮಿ ಒಬ್ಬರನ್ನೇ ಫಾಲೋ ಮಾಡುವುದಿಲ್ಲ. ಮತದಾರರು ಕುಮಾರಸ್ವಾಮಿ ತಿಳಿದುಕೊಂಡಷ್ಟು ದಡ್ಡರಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.jk-logo-justkannada-logoಕುಮಾರಸ್ವಾಮಿ ಅವರು ಚುನಾವಣೆ ಸಂದರ್ಭ ಜಾತಿ ಅಸ್ತ್ರವನ್ನು ಪ್ರಯೋಗಿಸುತ್ತಾರೆ. ಚುನಾವಣೆ ಸಂದರ್ಭದಲ್ಲಿ ಮಾತ್ರವೇ ಅವರಿಗೆ ಜಾತಿ ನೆನಪಾಗುತ್ತದೆ. ಆದರೆ, ಈ ಅಸ್ತ್ರ ಚುನಾವಣೆಯಲ್ಲಿ ಪರಿಣಾಮ ಬೀರುವುದಿಲ್ಲ. ಹಾಗೇನಾದರೂ, ಬೀರಿದ್ದರೆ ಮಂಡ್ಯದಲ್ಲಿ ನಿಖಿಲ್ ಸೋಲುತ್ತಿರಲಿಲ್ಲ. ಒಕ್ಕಲಿಗರು ಕುಮಾರಸ್ವಾಮಿ ಅವರನ್ನು ಮಾತ್ರವಲ್ಲದೇ, ಇತರೆ ನಾಯಕರನ್ನು ಫಾಲೋ ಮಾಡುತ್ತಾರೆ ಎಂದು ಟಾಂಗ್ ನೀಡಿದ್ದಾರೆ.Kumaraswamy-does-follow-single-person-Opposition-leader-Siddaramaiah

ಬಿಜೆಪಿಗೆ ಇನ್ನೂ ಅಭ್ಯರ್ಥಿ ಆಯ್ಕೆ ಮಾಡುವುದಕ್ಕೆ ಆಗಿಲ್ಲ. ಅವರು ಆಯ್ಕೆ ಮಾಡುವ ಅಭ್ಯರ್ಥಿಯನ್ನು ಸ್ಥಳೀಯ ನಾಯಕರು ಒಪ್ಪುತ್ತಿಲ್ಲ. ಬಿಜೆಪಿಯಲ್ಲಿ ಅಭ್ಯರ್ಥಿ ವಿಚಾರವಾಗಿ ಸಂಘರ್ಷ ನಡೆಯುತ್ತಿದೆ ಎಂದು ಟೀಕಿಸಿದ್ದಾರೆ.

key words : Kumaraswamy-does-follow-single-person-Opposition-leader-Siddaramaiah