ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲಿನ ಹಲ್ಲೆಗೆ ಕುರುಬೂರು ಶಾಂತಕುಮಾರ್ ಖಂಡನೆ…

ಬೆಂಗಳೂರು,ಏಪ್ರಿಲ್,3,2021(www.justkannada.in): ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಮೇಲೆ ಹಲ್ಲೆ ಘಟನೆಯನ್ನ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್  ಖಂಡಸಿದ್ದಾರೆ.Illegally,Sand,carrying,Truck,Seized,arrest,driver

ಈ ಕುರಿತು ಮಾತನಾಡಿರುವ ಕುರುಬೂರು ಶಾಂತಕುಮಾರ್, ರಾಜಸ್ಥಾನದ ಅಲ್ವರ್ ಜಿಲ್ಲೆಗೆ ಕಿಸಾನ್ ಮಹಾ ಪಂಚಾಯತ್  ನಲ್ಲಿ ಭಾಗವಹಿಸಲು ತೆರಳುತ್ತಿದ್ದ ವೇಳೆ  ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಮುಖಂಡ ರಾಕೇಶ್ ಟಿಕಾಯತ್  ಕಾರಿನ ಮೇಲೆ ದಾಳಿ ನಡೆಸಿ ಹಲ್ಲೆ ನಡೆಸಲು ಯತ್ನಿಸಿದ್ದು, ಈ ಮೂಲಕ  ಬಿಜೆಪಿ ಬೆಂಬಲಿಗರು ಗೂಂಡಾ ವರ್ತನೆ ತೋರಿದ್ದಾರೆ ಎಂದು ಕಿಡಿಕಾರಿದರು. Kurubur Shanthakumar –condemns- assault - national farmer leader -Rakesh Tikayat

ರೈತ ಚಳುವಳಿಯನ್ನು ಹತ್ತಿಕ್ಕಲು ಪ್ರಜಾಪ್ರಭುತ್ವ ದಮನಕಾರಿ ನೀತಿ ಅನುಸರಿಸುತ್ತಿರುವುದು ರಾಷ್ಟ್ರೀಯ ಪಕ್ಷದ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಈ ರೀತಿಯ ಗೂಂಡಾ ವರ್ತನೆಗೆ ದೇಶದ ರೈತರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದ್ದಾರೆ.

Key words: Kurubur Shanthakumar –condemns- assault – national farmer leader -Rakesh Tikayat