Monday, September 7, 2026

BDA Apartments

Home Front Page ‘ಕುಶ’ ಈಗ ಬಂಧ ಮುಕ್ತ- ಸಚಿವ ಅರವಿಂದ್ ಲಿಂಬಾವಳಿ

‘ಕುಶ’ ಈಗ ಬಂಧ ಮುಕ್ತ- ಸಚಿವ ಅರವಿಂದ್ ಲಿಂಬಾವಳಿ

ಮೈಸೂರು,ಜೂನ್,4,2021(www.justkannada.in): ಕುಶ ಆನೆಯನ್ನು ದುಬಾರೆ ಶಿಬಿರದಿಂದ ಕರೆದೊಯ್ದು ನೆನ್ನೆ ಸಂಜೆ  ಅರಣ್ಯ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದೆ, ಇದರಿಂದ ಕುಶ ಬಂಧಮುಕ್ತ ನಾಗಿದ್ದಾನೆ  ಎಂದು ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.jk

ಅರಣ್ಯ ಇಲಾಖೆಯ ವಶದಲ್ಲಿದ್ದ ಆನೆ ಕುಶ ನನ್ನು ಸ್ವತಂತ್ರವಾಗಿ ಅರಣ್ಯದಲ್ಲಿ ಬಿಡಲು ಈ ಹಿಂದೆ ನಡೆದ ಸಭೆಯಲ್ಲಿ ಸಚಿವ ಅರವಿಂದ ಲಿಂಬಾವಳಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು,

ಅದರಂತೆ ಅಗತ್ಯ ಸಿದ್ಧತೆಗಳನ್ನು ನಡೆಸಿ ಕುಶ  ನನ್ನು ಬಿಡುಗಡೆ ಮಾಡಬೇಕಾದ ಪ್ರದೇಶವನ್ನು ಗುರುತಿಸಿ, ಅದಕ್ಕೆ ರೇಡಿಯೋ ಕಾಲರ್ ಅಳವಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಲಯಾರಣ್ಯಾಧಿಕಾರಿ ಅನನ್ಯ ಕುಮಾರ್ ಜೆ, ಉಪ ವಲಯ ಅರಣ್ಯಾಧಿಕಾರಿ ಕೆ ಪಿ ರಂಜನ್ ಹಾಗೂ ಅರಣ್ಯ ಪಶುವೈದ್ಯಾಧಿಕಾರಿ ಡಾಕ್ಟರ್ ವಾಸಿಂ ಮಿರ್ಜಾ ಹಾಗೂ ಅರಣ್ಯ ಇಲಾಖೆಯ ಇತರ ಅಧಿಕಾರಿಗಳು ಕುಶ ಬಿಡುಗಡೆಯ ಸಂದರ್ಭದಲ್ಲಿ ಹಾಜರಿದ್ದು ಬೀಳ್ಕೊಟ್ಟರು.

Key words: Kusha- elephant- now-free- Minister- Arvind Limbavali