ಬೆಂಗಳೂರು,ಅಕ್ಟೋಬರ್,27,2025 (www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) 2025-2028ನೇ ಸಾಲಿಗೆ ರಾಜ್ಯ ಘಟಕ ಮತ್ತು 31 ಜಿಲ್ಲೆಗಳ ಜಿಲ್ಲಾ ಘಟಕಗಳ (ಅಧ್ಯಕ್ಷರು, ಉಪಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗಳು, ಖಜಾಂಚಿ, ಜಿಲ್ಲಾ ಕಾರ್ಯಕಾರಿ ಸಮಿತಿ ಮತ್ತು ರಾಜ್ಯ ಕಾರ್ಯಕಾರಿ ಸಮಿತಿಯ ಒಟ್ಟು 784 ಸ್ಥಾನಗಳಿಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನ 27-10-2025 ರಂದು ಒಟ್ಟು 1447 ಸ್ಪರ್ಧಾಕಾಂಕ್ಷಿಗಳು ನಾಮಪತ್ರಗಳನ್ನು ಸಲ್ಲಿಸಿದ್ದಾರೆ.
ದಿನಾಂಕ: 28-10-2025 ರಂದು ಮಂಗಳವಾರ ನಾಮಪತ್ರ ಪರಿಶೀಲನೆ ಜಿಲ್ಲಾ ಮತ್ತು ರಾಜ್ಯ ಘಟಕಗಳಲ್ಲಿ ಏಕಕಾಲಕ್ಕೆ ನಡೆಯಲಿದೆ.
ದಿನಾಂಕ: 30-10-2025 ರಂದು ಗುರುವಾರ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿರುತ್ತದೆ.
ದಿನಾಂಕ: 09-11-2025 ರಂದು ಭಾನುವಾರ ಜಿಲ್ಲಾ ಮತ್ತು ರಾಜ್ಯ ಘಟಕದಲ್ಲಿ ಏಕಕಾಲಕ್ಕೆ ಮತದಾನ ನಡೆಯಲಿದೆ ಎಂದು ಕೆಯುಡಬ್ಲುಜೆ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ (ಟೆಲೆಕ್ಸ್)ತಿಳಿಸಿದ್ದಾರೆ.
Key words: KUWJ, elections, 1447 nominations , 784 seats







