Saturday, September 5, 2026

BDA Apartments

Home Front Page ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್

ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ- ಡಿಸಿಎಂ ಡಿ.ಕೆ ಶಿವಕುಮಾರ್ ಟ್ವೀಟ್

ಬೆಂಗಳೂರು,ಜನವರಿ,14,2026 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಸುದ್ದಿಯಗುತ್ತಿದ್ದು, ಈ ಮಧ್ಯೆ  ನಿನ್ನೆ ಮೈಸೂರಿನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು  ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರ ಜೊತೆ ಕೆಲಕಾಲ ಚರ್ಚಿಸಿದ್ದರು. ಈ ಬೆನ್ನಲ್ಲೆ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಹೌದು ಪ್ರಯತ್ನ ವಿಫಲವಾದರೂ ಪ್ರಾರ್ಥನೆ ವಿಫಲ ಆಗುವುದಿಲ್ಲ’ಎಂದು ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಸಾಕಷ್ಟು ಕುತೂಹಲ ಮೂಡಿಸಿದೆ.

ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮಿಳುನಾಡಿಗೆ ತೆರಳುವ ಮಾರ್ಗಮಧ್ಯೆ  ಮೈಸೂರಿಗೆ ಆಗಮಿಸಿದ್ದರು  ರಾಹುಲ್ ಗಾಂಧಿ ಅವರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದ್ದರು. ನಂತರ ವಾಪಸ್ ದೆಹಲಿಗೆ ಹೋಗುವಾಗಲೂ ಮೈಸೂರಿನ ಏರ್ ಪೋರ್ಟ್ ಗೆ ಬಂದಿದ್ದ ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದರು.

Key words: prayer, does not, fail, DCM, D.K. Shivakumar