Sunday, September 13, 2026

BDA Apartments

ಸರ್ಕಾರ ಬೆಲೆ ಏರಿಕೆ ಮಾಡಿ ಜನರನ್ನು ಮೂರ್ಖರನ್ನಾಗಿಸಿದೆ – ಎಲ್ ನಾಗೇಂದ್ರ BDA JK...
Home Front Page ಸರ್ಕಾರ ಬೆಲೆ ಏರಿಕೆ ಮಾಡಿ ಜನರನ್ನು ಮೂರ್ಖರನ್ನಾಗಿಸಿದೆ – ಎಲ್ ನಾಗೇಂದ್ರ

ಸರ್ಕಾರ ಬೆಲೆ ಏರಿಕೆ ಮಾಡಿ ಜನರನ್ನು ಮೂರ್ಖರನ್ನಾಗಿಸಿದೆ – ಎಲ್ ನಾಗೇಂದ್ರ

ಮೈಸೂರು,ಏಪ್ರಿಲ್,1,2025 (www.justkannada.in): ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರವಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಏಪ್ರಿಲ್ 1ರಂದು ಮತ್ತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಮೂರ್ಖರನ್ನಾಗಿ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಘಟಕದ ಅಧ್ಯಕ್ಷ ಎಲ್ ನಾಗೇಂದ್ರ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದು ಈ ಹಿನ್ನೆಲೆಯಲ್ಲಿ  ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸುದ್ದಿಗೋಷ್ಠಿ ನಡೆಸಲಾಯಿತು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸರ್ಕಾರದ ವಿರುದ್ದ ಗುಡುಗಿದ ಎಲ್ ನಾಗೇಂದ್ರ, ರಾಜ್ಯದಲ್ಲಿ ಹಾಲಿನ ದರ ಮತ್ತಷ್ಟು ದುಬಾರಿಯಾಗಿದೆ. ಮಂತ್ರಿಗಳು ಲೂಟಿಯಲ್ಲಿ ತೊಡಗಿದ್ದಾರೆ. ಮಂತ್ರಿಗಳ ಮೇಲೆ ಸಿಎಂ ಸಿದ್ದರಾಮಯ್ಯಗೆ ಹಿಡಿತವಿಲ್ಲದಂತಾಗಿದೆ. ರಾಜ್ಯ ಸರ್ಕಾರ ಮುಸ್ಲಿಮರ ತುಷ್ಠೀಕರಣದಲ್ಲಿ ತೊಡಗಿದೆ. ಸಂವಿಧಾನಕ್ಕೆ ವಿರುದ್ಧವಾಗಿ ಮುಸ್ಲಿಮರಿಗೆ ಪ್ರತ್ಯೇಕವಾಗಿ ಮೀಸಲಾತಿ ಜಾರಿಗೊಳಿಸುವ ಮೂಲಕ ವಿಭಿನ್ನ ಧೋರಣೆ ತಳೆದಿದೆ. ಮುಸ್ಲಿಮರಿಗೆ ನೀಡಿರುವ ಮೀಸಲಾತಿ ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ಒಪಿಡಿ ಶುಲ್ಕ ಹೆಚ್ಚಳ ಮಾಡಲಾಗಿದೆ. ಇದೇ ರೀತಿ ಜನನ ಮರಣ ಪ್ರಮಾಣ ಪತ್ರಗಳನ್ನು ನೀಡಲು ಹೆಚ್ಚಿನ ಶುಲ್ಕ ನಿಗದಿ ಮಾಡಲಾಗಿದೆ. ಉಚಿತವಾಗಿ ನೀಡಬೇಕಾದ ವೈದ್ಯಕೀಯ ಸೇವೆಗಳಿಗೆ ದರ ನಿಗದಿ ಮಾಡಿರುವುದು ಸರಿಯಲ್ಲ. ದರ ಏರಿಕೆ ಮೂಲಕ ರಾಜ್ಯ ಸರ್ಕಾರ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿದೆ ಎಂದು ಕಿಡಿಕಾರಿದರು.

ಕಾಂಗ್ರೆಸ್ ಪಕ್ಷ ಸೋಲಿನ ಭೀತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ನಡೆಸುತ್ತಿಲ್ಲ. ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಕಾಂಗ್ರೆಸ್ ಗೆ ಸೋಲಿನ ಭೀತಿ ಕಾಡುತ್ತಿದೆ. ಇದೇ ಕಾರಣರಿಂದ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದೆ. ಪಾಲಿಕೆಗೆ ಚುನಾವಣೆ ‌‌ನಡೆಸದ ಕಾರಣ ಕೇಂದ್ರದ ಅನುದಾನ ವಾಪಸ್ ಹೋಗಿದೆ ಎಂದು ಮಾಜಿ ಶಾಸಕ ಎಲ್ ನಾಗೇಂದ್ರ ಹರಿಹಾಯ್ದರು.

Key words: government, price, Hike, BJP,  L.Nagendra