ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು…

ಮೈಸೂರು,ಆ,17,2020(www.justkannada.in): ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಮಲ್ಲೂಪುರ ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಶುಗರ್ಸ್ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮೂಲದ ಅಮೃತ್ ಕುಮಾರ್(30) ಮೃತ ಕಾರ್ಮಿಕ. ಅಮೃತ್ ಕುಮಾರ್ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು.Labor -dies -bannari -Amman Sugars factory-nanjanagudu

ಕಬ್ಬು ಅರೆಯುವ ಯಂತ್ರವನ್ನು ವೆಲ್ಡಿಂಗ್ ಮಾಡುವ ಸಂದರ್ಭದಲ್ಲಿ ಅಮೃತ್ ಕುಮಾರ್ ಯಂತ್ರಕ್ಕೆ ಸಿಲುಕಿ ಇಡೀ ದೇಹವೇ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನಂಜನಗೂಡಿನ ಡಿವೈಎಸ್ಪಿ ಪ್ರಭಾಕರ್ ರಾವ್ ಸಿಂಧೆ, ವೃತ್ತ ನಿರೀಕ್ಷಕ ಲಕ್ಷ್ಮಿಕಾಂತ ತಳವಾರ್, ಬಿಳಿಗೆರೆ ಪಿಎಸ್ ಐ ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.

Key words: Labor -dies -bannari -Amman Sugars factory-nanjanagudu