ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಪೊಲೀಸರ ವಶಕ್ಕೆ.

ಕೊಡಗು,ಮಾರ್ಚ್,22,2024(www.justkannada.in):  ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿ ಮಾದರಿ ನೀತಿ ಸಂಹಿತೆ ಜಾರಿಯಾಗುತ್ತಿದ್ದು ಈ ನಡುವೆ ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ರೂ. ಹಣವನ್ನ ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿ ಕುಟ್ಟ ಎಂಬಲ್ಲಿ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 5 ಲಕ್ಷ ಹಣವನ್ನ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಕಾರು ಮತ್ತು ಹಣ ಯಾರಿಗೆ ಸೇರಿದ್ದು ಎಂಬ ಮಾಹಿತಿ ತಿಳಿದು ಬರಬೇಕಿದೆ.  ರಾಜ್ಯದಲ್ಲಿ ಎಲ್ಲಾ ಕಡೆ ಚೆಕ್ ಪೋಸ್ಟ್ ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

Key words: 5 lakhs – carried- illegally – car-sieze-kodagu