‘ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಹಾಗೂ ನೈಟ್ ಪಾಲಿಟಿಕ್ಸ್’: ವಿವಾದಕ್ಕೆ ಕಾರಣವಾದ ಬಿಜೆಪಿ ಮಾಜಿ ಎಂಎಲ್ಎ ಹೇಳಿಕೆ

ಬೆಂಗಳೂರು, ಸೆಪ್ಟೆಂಬರ್ 30, 2021 (www.justkannada.in): ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಕುರಿತು ಬಿಜೆಪಿ ಮಾಜಿ ಶಾಸಕ ಸಂಜಯ ಪಾಟೀಲ್ ಹೇಳಿದ ಮಾತೊಂದು ವಿವಾದಕ್ಕೆ ಕಾರಣವಾಗಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್​ ಅವರಿಗೆ ನೈಟ್ ಪೊಲಿಟಿಕ್ಸ್ ಚೆನ್ನಾಗಿ ಗೊತ್ತು ಎಂದು ಸಂಜಯ ಪಾಟೀಲ್ ಹೇಳಿದ್ದರು. ಈ ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಮಾಜಿ ಶಾಸಕರು ವಾಗ್ದಾಳಿ ನಡೆಸುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ.

ಬಿಜೆಪಿಯವರಿಗೆ ನೈಟ್ ಪೊಲಿಟಿಕ್ಸ್ ಮಾಡಿ ಗೊತ್ತಿಲ್ಲ. ಕಾಂಗ್ರೆಸ್​ನವರು ನೈಟ್ ಪೊಲಿಟಿಕ್ಸ್ ಮಾಡ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್​ಗೆ ನೈಟ್ ಪೊಲಿಟಿಕ್ಸ್ ಚೆನ್ನಾಗಿ ಗೊತ್ತು. ಹೀಗಾಗಿ ನೈಟ್ ಪೊಲಿಟಿಕ್ಸ್ ಮಾಡಿ ಗೆದ್ದು ಬಂದಿದ್ದಾರೆ ಎಂದು ಸಂಜಯ ಪಾಟೀಲ್ ಹೇಳಿದ್ದರು.

key words: ‘Lakshmi Hebbalkar and Night Politics’: Statement of ex-BJP MLA in controversy