“ಕೊನೇ ಘಳಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ” : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಫೆಬ್ರವರಿ,24,2021(www.justkannada.in) : ಇಪ್ಪತ್ತು  ವರ್ಷದಿಂದ ಇದೇ ರೀತಿ ಮೈಸೂರು ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ನಡೆಯುತ್ತಿದೆ. ಕೊನೇ ಘಳಿಗೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಒಂದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

jkಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಕಾಂಗ್ರೆಸ್ ಜೊತೆ ಮೈತ್ರಿ ಮುರಿದುಬೀಳಲು ಸಿದ್ದರಾಮಯ್ಯ ಅವರೇ ನೇರ ಕಾರಣ ಎಂದು ಹೇಳಿದ್ದರು. ಹಾಗೆಯೇ, ಇನ್ನೊಬ್ಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯಾವುದೇ ಕಾರಣಕ್ಕೂ ಜೆಡಿಎಸ್ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು ಎಂದರು.

ಸರ್ಕಾರದಿಂದ ಆಗಬೇಕಾದ ಎಲ್ಲ ಕೆಲಸಗಳಿಗೆ ನನ್ನ ಸಹಕಾರ

ನೂತನ ಮೇಯರ್ ಹಾಗೂ ಉಪಮೇಯರ್ ಅವರುಗಳಿಗೆ ನಾನು ಶುಭಾಶಯ ಕೋರುತ್ತೇನೆ. ಮೈಸೂರಿನ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಉಸ್ತುವಾರಿ ಸಚಿವನಾಗಿ ಹಾಗೂ ಸರ್ಕಾರದಿಂದ ಆಗಬೇಕಾದ ಎಲ್ಲ ಕೆಲಸಗಳಿಗೆ ನನ್ನ ಸಹಕಾರ ಇರುತ್ತದೆ ಎಂದಿದ್ದಾರೆ.

ಮುಂದಿನ ದಿನದಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕೇ ಸಿಗಲಿದೆ

chamundi-hill-time-set-this-evening-minister-st-somashekhar

ಬಿಜೆಪಿ ಅಧಿಕಾರ ಇದ್ದರಷ್ಟೇ ಕೆಲಸ ಮಾಡುತ್ತದೆ ಎನ್ನುವ ಪಕ್ಷವಲ್ಲ. ಇದು ತಳಮಟ್ಟದಿಂದ ಬೆಳೆದು ಬಂದ ಪಕ್ಷವಾಗಿದೆ ಮುಂದಿನ ದಿನದಲ್ಲಿ ಬಿಜೆಪಿಗೆ ಅಧಿಕಾರ ಸಿಕ್ಕೇ ಸಿಗಲಿದೆ ಎಂಬ ವಿಶ್ವಾಸ ನನಗಿದೆ ಎಂದು ತಿಳಿಸಿದ್ದಾರೆ.

key words : last-JDS-Congress-One-Minister-S.T.Somashekhar