ಇಂದು ಸಂಜೆ ಶಿವಾಜಿ ಪಾರ್ಕ್’ನಲ್ಲಿ ಲತಾ ಮಂಗೇಶ್ಕರ್ ಅಂತ್ಯಕ್ರಿಯೆ !

ಬೆಂಗಳೂರು, ಫೆಬ್ರವರಿ 06,2022 (www.justkannada.in): ಇಂದು ಸಂಜೆ ಶಿವಾಜಿ ಪಾರ್ಕ್ ನಲ್ಲಿ `ಲತಾ ಮಂಗೇಶ್ಕರ್’ ಅಂತ್ಯಕ್ರಿಯೆ ನೆರವೇರಲಿದೆ.

ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಇಂದು ನಿಧನರಾಗಿದ್ದರು.

ಇನ್ನು ಭಾರತ ರತ್ನ ಪುರಸ್ಕೃತ ಲತಾ ಮಂಗೇಶ್ಕರ್ ನಿಧನಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ 2 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.

ಈ ಬಗ್ಗೆ ಕೇಂದ್ರ ಸರ್ಕಾರದ ಮೂಲಗಳು ಮಾಹಿತಿ ನೀಡಿದ್ದು, 2 ದಿನಗಳ ಕಾಲ ದೇಶಾದ್ಯಂತ ಶೋಕಾಚರಣೆ ಘೋಷಣೆ ಮಾಡಲಾಗಿದ್ದು, ರಾಷ್ಟ್ರಧ್ವಜವು ಅರ್ಧ ಮಟ್ಟದಲ್ಲಿ ಹಾರಾಡಲಿದೆ.