Wednesday, November 4, 2026

Dasara Wishes

Happy Dasara
Home Front Page ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಹಿಟ್ಲರ್ ಮಾರ್ಗ ಅತ್ಯಂತ ದುರದೃಷ್ಟಕರ- ಕೇಂದ್ರ ಸಚಿವ ಹೆಚ್ ಡಿಕೆ...

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್: ಹಿಟ್ಲರ್ ಮಾರ್ಗ ಅತ್ಯಂತ ದುರದೃಷ್ಟಕರ- ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ

ಸಿದ್ದರಾಮಯ್ಯ ವಿರುದ್ದದ ಸ್ಟಿಂಗ್‌ ಸಂಚಿನಲ್ಲಿ ಶಾಮೀಲಾದ ʼನೀಲಿಕಣ್ಣಿನ ಮಂತ್ರಿʼ- ಹೆಚ್.ಡಿಕೆ ವಾಗ್ದಾಳಿ

ಬೆಂಗಳೂರು,ಡಿಸೆಂಬರ್,10,2024 (www.justkannada.in): 2ಎ ಮೀಸಲಾತಿಗೆ ಆಗ್ರಹಿಸಿ ಬೆಳಗಾವಿಯ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪಂಚಮಸಾಲಿ  ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಕ್ರಮ ಖಂಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಪಂಚಮಸಾಲಿ ಬಂಧುಗಳ ಹೋರಾಟವನ್ನು ಹತ್ತಿಕ್ಕಲು ರಾಜ್ಯ  ಕಾಂಗ್ರೆಸ್ ಸರಕಾರ ಅಡಾಲ್ಫ್ ಹಿಟ್ಲರ್ ಮಾರ್ಗವನ್ನು ಆಯ್ಕೆ ಮಾಡಿಕೊಂಡಿರುವುದು ಅತ್ಯಂತ ದುರದೃಷ್ಟಕರ. ಸಂತರು, ಪಂಚಮಸಾಲಿ ಸಮುದಾಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಬಸವ ಮೃತ್ಯುಂಜಯ ಮಹಾಸ್ವಾಮೀಜಿಗಳನ್ನು ಅತ್ಯಂತ ಹೇಯವಾಗಿ ನಡೆಸಿಕೊಂಡಿರುವುದು ನನಗೆ ಅತೀವ ನೋವುಂಟು ಮಾಡಿದೆ. ಇದು ಶಿಲಾಯುಗ ಕಾಲದ ಮನಃಸ್ಥಿತಿಯ ಸರಕಾರ ಎಂದು ಕಿಡಿಕಾರಿದ್ದಾರೆ.

ತಮ್ಮ ಬೇಡಿಕೆಗಳ ಬಗ್ಗೆ ಪೂಜ್ಯ ಸ್ವಾಮೀಜಿ ಅವರು, ಸಮುದಾಯದ ಪ್ರಮುಖರು ನಿರಂತರವಾಗಿ ಸರಕಾರಕ್ಕೆ ಮನವಿ ಮಾಡುತ್ತಲೇ ಇದ್ದರು. ಆದರೂ ಸರಕಾರ ಕಿವುಡಾಗಿತ್ತು, ನಿರ್ಲಕ್ಷ್ಯ ವಹಿಸಿತ್ತು. ಶಾಂತಿಯುತವಾಗಿ ಪ್ರತಿಭಟಿಸಲು ಬಂದ  ಸ್ವಾಮೀಜಿಗಳು, ಸಮುದಾಯದ ನಾಯಕರು, ಜನತೆಯ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸ್ ವಶಕ್ಕೆ ತೆಗೆದುಕೊಂಡ ಕ್ರಮ ಖಂಡನೀಯ.

ಸರಕಾರವೇ ಶಾಂತಿ ಕದಡುವ ದುಷ್ಪ್ರಯತ್ನ ಮಾಡಿದರೆ ಅದಕ್ಕೆ ಸರಕಾರವೇ ಪೂರ್ಣ ಹೊಣೆ. ಕೂಡಲೇ ಪೂಜ್ಯ ಸ್ವಾಮೀಜಿ ಅವರ ಹಾಗೂ ಸಮುದಾಯದ ಕ್ಷಮೆ ಕೇಳಬೇಕು ಹಾಗೂ ಅವರ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಬೇಕು ಎಂದು ಹೆಚ್ ಡಿಕೆ ಆಗ್ರಹಿಸಿದ್ದಾರೆ.

Key words: Lathicharge, Panchmasali protest, Union Minister, HDK