ಪ್ರವೀಣ್ ನೆಟ್ಟಾರು ಅಂತಿಮಯಾತ್ರೆ ವೇಳೆ ಲಾಠಿಚಾರ್ಜ್ ಹಿನ್ನೆಲೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ.

ಮಂಗಳೂರು,ಜುಲೈ,29,2022(www.justkannada.in):  ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮಯಾತ್ರೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಮಾಡಲಾಗಿತ್ತು. ಈ  ಹಿನ್ನೆಲೆಯಲ್ಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.

ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್ ಐ ಗಳ ವರ್ಗಾವಣೆ ಮಾಡಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ಆದೇಶ ಹೊರಡಿಸಿದ್ದಾರೆ. ಕಾರ್ಯಕರ್ತರ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಬೆಳ್ಳಾರೆಗೆ ನೂತನ ಪಿಎಸ್ ಐ ಆಗಿ ಸುಹಾಸ್ ಹಾಗೂ ಸುಬ್ರಹ್ಮಣ್ಯ ಠಾಣೆಗೆ ಪಿಎಸ್ ಐ ಆಗಿ ಟಿ.ಮಂಜುನಾಥ್ ನೇಮಕ ಮಾಡಲಾಗಿದೆ. ವರ್ಗಾವಣೆಯಾದ ಪಿಎಸ್ ಐ ಗಳಿಗೆ ಜಾಗ ತೋರಿಸದೇ ಮಂಗಳೂರು ಐಜಿ ಕಚೇರಿಯಲ್ಲಿ ವರದಿ ಮಾಡಲು ಸೂಚನೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Lathicharge-Praveen Nettaru- final yatra- Transfer – police officers.