ಬೆಳಗಾವಿ ಮತ್ತು ಹುಬ್ಬಳ್ಳಿ-ಧಾರವಾಡ ಪಾಲಿಕೆಯಲ್ಲಿ ಬಿಜೆಪಿಗೆ ಮುನ್ನಡೆ.

ಬೆಳಗಾವಿ,ಸೆಪ್ಟಂಬರ್,6,2021(www.justkannada.in):  ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಮತ್ತು ಕಲ್ಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣಾ ಫಲಿತಾಂಶ ಹೊರ ಬೀಳುತ್ತಿದ್ದು ಎರಡು ಪಾಲಿಕೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ 58 ಕ್ಷೇತ್ರಗಳ ಪೈಕಿ ಬಿಜೆಪಿ 13 ಕ್ಷೇತ್ರಗಳಲ್ಲಿ ಕಾಂಗ್ರೆಸ್  7 ಕ್ಷೇತ್ರಗಳಲ್ಲಿ ಇತರೇ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಜೆಡಿಎಸ್ ಯಾವುದೇ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಗದ್ದುಗೆಗೇರಲು 33 ಸ್ಥಾನಗಳನ್ನ ಗೆಲ್ಲಬೇಕಿದೆ.

ಹಾಗೆಯೇ  ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ.  82 ಕ್ಷೇತ್ರಗಳ ಪೈಕಿ ಬಿಜೆಪಿ 25, ಕಾಂಗ್ರೆಸ್ 12, ಇತರೆ ಒಂದು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿವೆ. ಇಲ್ಲಿ ಅಧಿಕಾರಕ್ಕೇರಲು 45 ಮ್ಯಾಜಿಕ್ ನಂಬರ್ ಆಗಿದೆ.

ಇನ್ನು ಕಲ್ಬುರ್ಗಿ ನಗರ ಪಾಲಿಕೆಯಲ್ಲಿ  ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. 55 ಕ್ಷೇತ್ರಗಳ ಪೈಕಿ ಬಿಜೆಪಿ 6 ಕಾಂಗ್ರೆಸ್ 10, ಜೆಡಿಎಸ್ 2 ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ. ಮೂರು ಮಹಾನಗರ ಪಾಲಿಕೆಗಳಿಗೂ ಸೆಪ್ಟಂಬರ್ 3 ರಂದು ಚುನಾವಣೆ ನಡೆದಿತ್ತು.

Key words: Lead -BJP – Belgaum -Hubli-Dharwad –city corporation