ಭವಾನಿಪುರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿಗೆ ಮುನ್ನಡೆ.

ಕೊಲ್ಕತ್ತಾ,ಸೆಪ್ಟಂಬರ್,3,2021(www.justkannada.in): ಪಶ್ಚಿಮಬಂಗಾಳದ  ಎರಡು ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬೀಳುತ್ತಿದೆ. ಈ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ  ಸಾಧಿಸಿದ್ದಾರೆ.

ಇನ್ನು ದೇಶದ ಗಮನ ಸೆಳೆದಿರುವ  ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 3680 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಶಾಮಸರ್ ಗಂಜ್ ನಲ್ಲಿ 500 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ. ಜಂಗಿಪೂರ್ ಲೋಕಸಭೆ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ 2,500 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words: Lead –TMC- candidate- Mamata Banerjee – Bhawanipur