ನಾಯಕತ್ವ ಬದಲಾವಣೆ ಗಾಳಿ ಸುದ್ಧಿ: ಬೊಮ್ಮಾಯಿ ಅವರೇ ಸಿಎಂ- ಸಚಿವ ಗೋವಿಂದ ಕಾರಜೋಳ.

ಬೆಳಗಾವಿ,ಮಾರ್ಚ್,12,2022(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಗಾಳಿ ಸುದ್ಧಿಯಾಗಿದೆ ಬಸವರಾಜ ಬೊಮ್ಮಾಯಿ ಅವರೇ ಸಿಎಂ ಆಗಿರುತ್ತಾರೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ನುಡಿದರು.

ಬೆಳಗಾವಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಗೊವಿಂದ ಕಾರಜೋಳ, ಸಂಪುಟ ವಿಸ್ತರಣೆ ಇದು ಸಿಎಂ ಪರಮಾಧಿಕಾರವಾಗಿದೆ. ಹೈಕಮಾಂಡ್ ಜತೆ ಚರ್ಚಿಸಿ ತೀರ್ಮಾನ ಮಾಡುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದರು.

ಪಂಚರಾಜ್ಯ ಚುನಾವಣೆ ಇದು ಕೇವಲ 5 ರಾಜ್ಯಗಳಿಗಲ್ಲ. ದೇಶದ ಸಮಗ್ರತೆ ದೃಷ್ಟಿಯಿಂದ ನೋಡಿದ್ರೇ ದೇಶಕ್ಕೆ ಒಂದು ಸಂದೇಶ ರವಾನಿಸಿರುವ ಚುನಾವಣೆಯಾಗಿದೆ. ಕಾಂಗ್ರೆಸ್ ಪಕ್ಷ ಅಧೋಗತಿಗೆ ತಲುಪಿದೆ. ಕರ್ನಾಟಕದಲ್ಲಿ ಕಾಂಗ್ರೆಸ್  ಮತ್ತಷ್ಟು ಸ್ಥಾನ ಕಳೆದುಕೊಳ್ಳುತ್ತದೆ ಎಂದು ಭವಿಷ್ಯ ನುಡಿದರು.

Key words: Leadership-change –Minister- Govinda Karajola.