Thursday, October 15, 2026

Dasara Wishes

Happy Dasara
Home Front Page ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ: ಹೊಸ ಬಾಂಬ್ ಸಿಡಿಸಿದ ಸಚಿವ ಆರ್.ಅಶೋಕ್…

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ: ಹೊಸ ಬಾಂಬ್ ಸಿಡಿಸಿದ ಸಚಿವ ಆರ್.ಅಶೋಕ್…

ಬೆಂಗಳೂರು,ಮೇ,26,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚಿಯಾಗುತ್ತಿದ್ದು ಈ ಬಗ್ಗೆ ಕಂದಾಯ ಸಚಿವ ಆರ್.ಅಶೋಕ್   ಹೊಸ ಬಾಂಬ್ ಸಿಡಿಸಿದ್ದಾರೆ.jk

ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಸಚಿವ ಆರ್.ಅಶೋಕ್,  ನಾಯಕತ್ವ ಬದಲಾವಣೆ ಚಟುವಟಿಕೆ ನಡೆಯುತ್ತಿದೆ. ನಾಯಕತ್ವ ಬದಲಾವಣೆ ವಿಚಾರವಾಗಿ ಕೆಲ ಸಚಿವರು, ಶಾಸಕರು ಪ್ರಯತ್ನಿಸುತ್ತಿದ್ದಾರೆ. ದೆಹಲಿಯಲ್ಲಿ ಅನೇಕ ಸಚಿವರು, ಶಾಸಕರು ಬೀಡುಬಿಟ್ಟಿರುವುದು ನಿಜ. ಕೆಲವರು ಪ್ರತ್ಯೇಕ ಸಭೆಗಳನ್ನ ನಡೆಸುತ್ತಿರುವುದು ಗಮನಕ್ಕೆ ಬಂದಿದೆ ಎಂದಿದ್ದಾರೆ.

ಇನ್ನು ಸಚಿವರಾದ ವಿ.ಸೋಮಣ್ಣ, ಬಿ.ಸಿ ಪಾಟೀಲ್, ಮುರುಗೇಶ್ ನಿರಾಣಿ ಅವರು ನಾಯಕತ್ವ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

Key words: Leadership –Change-Minister – R. Ashok- New Bomb