Saturday, October 17, 2026

Dasara Wishes

ಮಾವಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹ: ಇಂದು ಕೋಲಾರ ಬಂದ್ DasraWishes_JK DasraWishes JK
Happy Dasara
Home Front Page ಪಾಕ್ ಪರ ಘೋಷಣೆ ಕೂಗಿದವರ ವಿರುದ್ದ ಕಾನೂನು ರೀತಿ ಕ್ರಮ- ಗೃಹ ಸಚಿವ ಡಾ.ಜಿ. ಪರಮೇಶ್ವರ್

ಪಾಕ್ ಪರ ಘೋಷಣೆ ಕೂಗಿದವರ ವಿರುದ್ದ ಕಾನೂನು ರೀತಿ ಕ್ರಮ- ಗೃಹ ಸಚಿವ ಡಾ.ಜಿ. ಪರಮೇಶ್ವರ್

ಬೆಂಗಳೂರು,ಫೆಬ್ರವರಿ,29,2024(www.justkannada.in):  ವಿಧಾನಸೌಧದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರನ್ನ ಪತ್ತೆ ಹಚ್ಚಿ ಅವರ ವಿರುದ್ದ ಕಾನೂನು  ರೀತಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್  ಭರವಸೆ ನೀಡಿದರು.

ಇಂದು ಮಾತನಾಡಿದ ಗೃಹ ಸಚಿವ ಪರಮೇಶ್ವರ್ , ಈಗಾಗಲೇ ಈ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಈಗಾಗಲೇ ಈ ಪ್ರಕರಣದ ಬಗ್ಗೆ ಎಫ್‍ಐಆರ್ ದಾಖಲಿಸಿಕೊಂಡು, ತನಿಖೆಯನ್ನ ನಡೆಯುತ್ತಿದೆ. ದೇಶದ ಹಿತದೃಷ್ಟಿಯಿಂದ ಹಾಗೂ ಸಮಾಜದ ಹಿತದೃಷ್ಟಿಯಿಂದ ಆರೋಪಿಗಳನ್ನ ಶೀಘ್ರದಲ್ಲಿ ಪತ್ತೆ ಹಚ್ಚಿ ಬಂಧಿಸಲಾಗುವುದು. ಪಾಕಿಸ್ತಾನದ ಪರ ಘೋಷಣೆ ಕೂಗಿರುವವರನ್ನು ರಕ್ಷಿಸುವ ಮಾತೇ ಇಲ್ಲ ಎಂದರು.

ಪಾಕ್ ಪರ ಘೋಷಣೆಯನ್ನು ಯಾರೇ ಕೂಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

Key words: Legal -action- against – shouted pro-Pak -slogans – Home Minister -Parameshwar