ದೇಗುಲಗಳ ರಕ್ಷಣೆಗೆ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 19, 2021 (www.justkannada.in): ನಂಜನಗೂಡು ದೇಗುಲ ನೆಲಸಮ ಗಮನಕ್ಕೆ ಬಾರದೇ ನಡೆದ ಘಟನೆ, ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

ದೇಗುಲ ತೆರವು ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆಯಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟನೆ ಬಳಿಕ ಮಾತನಾಡಿದ್ದಾರೆ.

ನಂಜನಗೂಡು ತಾಲೂಕಿನಲ್ಲಿ ನಡೆದ ದೇಗುಲ ತೆರವು ಘಟನೆಗಳು ಮತ್ತೆ ಮರುಕಳಿಸದಂತೆ ಕ್ರಮವಹಿಸಲಾಗುವುದು. ಇದಕ್ಕಾಗಿ ಅಗತ್ಯ ಕಾನೂನಾತ್ಮಕ, ಆಡಳಿತಾತ್ಮಕ ಕ್ರಮ ತೆಗೆದುಕೊಳ್ಳಲು ಚಿಂತನೆ ನಡೆಸಿದ್ದೇವೆ ಎಂದು ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.

ನಂಜನಗೂಡು ದೇಗುಲ ನೆಲಸಮವಾದ ಘಟನೆ ಎಲ್ಲರ ಮನಸ್ಸಿಗೆ ನೋವು ತಂದಿದೆ. ಅಧಿಕಾರಿಗಳು ನಮ್ಮ ಗಮನವನ್ನು ಬಾರದೆ ಮಾಡಿರುವ ಘಟನೆ ಇದಾಗಿದೆ. ಮಂದಿರದ ಘಟನೆ ನಡೆದ ದಿನದಿಂದ ನಾನು ನಿರಂತರ ಚರ್ಚೆ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ಆಡಳಿತಾತ್ಮಕ, ಕಾನೂನಾತ್ಮಕ ಕ್ರಮ ತೆಗೆದುಕೊಂಡು ಘಟನೆ ಮರುಕಳಿಸದಂತೆ ನೋಡಿ ಕೊಳ್ಳುತ್ತೇವೆ. ಅಲ್ಲಿನ ಭಕ್ತರ‌ ಮನಸ್ಸಿಗೆ ಆಗಿರುವ ಘಾಸಿಯನ್ನು ಸರಿಪಡಿಸುವ ಪ್ರಯತ್ನವನ್ನು ಹಿರಿಯರ ಜೊತೆ ಚರ್ಚಿಸಿ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.

key words: Legal and administrative action for the protection of temples: Basavaraj Bommai