ಶಾಸಕ ರಿಜ್ವಾನ್ ಅರ್ಷದ್ ರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಡೇಟ್ ಫಿಕ್ಸ್….

ಬೆಂಗಳೂರು,ಜ,27,2020(www.justkannada.in):  ಶಾಸಕ ರಿಜ್ವಾನ್ ಅರ್ಷದ್ ಅವರಿಂದ ತೆರವಾದ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದೆ.

ಫೆ.17 ರಂದು ವಿಧಾನಪರಿಷತ್ ಗೆ ಉಪಚುನಾವಣೆಯ ನಡೆಯಲಿದ್ದು, ಮತದಾನ ನಡೆದ ನಂತರ ಅದೇ ದಿನ ಸಂಜೆ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತು ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಜನವರಿ 30 ರಂದು ಅಧಿಸೂಚನೆ ಪ್ರಕಟವಾಗಲಿದೆ.  ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನವಾಗಿದೆ. ಫೆಬ್ರವರಿ.7ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. ಫೆಬ್ರವರಿ. 10ರಂದು ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ.

ಫೆಬ್ರವರಿ. 17 ರಂದು ಬೆಳಗ್ಗೆ 9ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಸಂಜೆ 5 ಗಂಟೆಗೆ ಮತಎಣಿಕೆ ನಡೆಯಲಿದೆ.

Key words: Legislative council- by-election- date fix – feb 17