Wednesday, August 19, 2026

BDA Apartments

Home Front Page ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ  ಪ್ರಕಟ-ಮಾಜಿ ಸಿಎಂ  ಹೆಚ್.ಡಿ.ಕುಮಾರಸ್ವಾಮಿ

ವಿಧಾನ ಪರಿಷತ್ ಚುನಾವಣೆ: ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಶೀಘ್ರ  ಪ್ರಕಟ-ಮಾಜಿ ಸಿಎಂ  ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು,ನವೆಂಬರ್,10,2021(www.justkannada.in):  ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್’ಗೆ ಘೋಷಣೆ ಆಗಿರುವ ಚುನಾವಣೆಗೆ ಜೆಡಿಎಸ್ ಪಕ್ಷದ ಅಭ್ಯರ್ಥಿಗಳನ್ನು ಶೀಘ್ರವೇ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ನಡೆಯುತ್ತಿರುವ ಜನತಾ ಪರ್ವ 1.O ದ ಎರಡನೇ ಹಂತದ ಸಂಘಟನಾ ಕಾರ್ಯಗಾರ ‘ ಜನತಾ ಸಂಗಮ ‘ದ ಮೂರನೇ ದಿನ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮೈಸೂರಿನಲ್ಲಿ ಎರಡು ಕ್ಷೇತ್ರಗಳು ಇವೆ. ಮೈಸೂರಿನ ಒಂದು ಕ್ಷೇತ್ರ ಹಾಗೂ ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಅಭ್ಯರ್ಥಿಗಳ ಪಟ್ಟಿಯನ್ನು ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ ಎಂದು ಅವರು ಹೇಳಿದರು.

ತುಮಕೂರಿನ ನಾಯಕರ ಸಭೆ ಕೂಡ ಮಂಗಳವಾರ  ಮಾಡಿದ್ದೇನೆ. ಟಿಕೆಟ್ ಆಕಾಂಕ್ಷಿಗಳ ಪಟ್ಟಿಯನ್ನು ಇಟ್ಟುಕೊಂಡಿದ್ದೇನೆ. ಅಂತಿಮ ವರದಿ, ಪರಿಶೀಲನೆ ಮುಗಿದ ಮೇಲೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಉಳಿದ ಜಿಲ್ಲೆಗಳ ಸಭೆಯನ್ನೂ ಆದಷ್ಟು ಬೇಗ ಮಾಡಲಾಗುವುದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಉಳಿದಂತೆ, ಹಾಸನದ ವಿಚಾರ ಅಂತಿಮವಾಗಿ ದೇವೇಗೌಡರು ತೀರ್ಮಾನ ಮಾಡುತ್ತಾರೆ. ರಾಯಚೂರು ಬಿಜಾಪುರ, ಕಲಬುರ್ಗಿಯಲ್ಲು ನಮ್ಮ ಅಭ್ಯರ್ಥಿಗಳನ್ನು  ನಿಲ್ಲಿಸಬೇಕು ಎಂಬ ಮನವಿ ಇದೆ. ಪರಿಶೀಲನೆ ಮಾಡುತ್ತಿದ್ದೇವೆ ಎಂದು  ಹೆಚ್.ಡಿಕೆ ಮಾಹಿತಿ ನೀಡಿದರು.

Key words: legislative Council –election- JDS candidates -list -Former CM- HD Kumaraswamy