ಬೆಂಗಳೂರು,ಜೂನ್,18,2026 (www.justkannada.in): ಇಂದು ವಿಧಾನಸಭೆಯಿಂದ ವಿಧಾನ ಪರಿಷತ್ ನ 7 ಸ್ಥಾನಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ವಿಧಾನಸೌಧದಲ್ಲಿ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರವೇ ಫಲಿತಾಂಶ ಪ್ರಕಟಗೊಳ್ಳಲಿದೆ. ಈ ಮಧ್ಯೆ ಮತ ದೃಢೀಕರಣ ಪ್ರಕ್ರಿಯೆಯಲ್ಲಿ ಒಬ್ಬ ಶಾಸಕರ ಮತ ಅಸಿಂಧುವಾಗಿದೆ.
ಕಾಂಗ್ರೆಸ್ ನ 5ನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಅವರಿಗೆ 32 ಮತಗಳು ಚಲಾವಣೆಯಾದರೇ ಜೆಡಿಎಸ್ ಅಭ್ಯರ್ಥಿ ಗೋವಿಂದರಾಜು ಅವರಿಗೆ 14 ಮತಗಳು ಚಲಾವಣೆಯಾಗಿವೆ. ಬಿಜೆಪಿಯ ಮೂರು ಜೆಡಿಎಸ್ ನಿಂದ 3 ಶಾಸಕರಿಂದ ಅಡ್ಡಮತದಾನವಾಗಿದೆ ಎನ್ನಲಾಗಿದೆ. ಈ ಮೂಲಕ ಕಾಂಗ್ರೆಸ್ 5ನೇ ಅಭ್ಯರ್ಥಿ ಗೆದ್ದಂತಾಗಿದ್ದು ಅಧಿಕೃತ ಘೋಷಣೆ ಬಾಕಿ ಇದೆ.

ಇಂದು 7 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆದಿದ್ದು ಈ ಪೈಕಿ ಕಾಂಗ್ರೆಸ್ ನ 5 ಅಭ್ಯರ್ಥಿಗಳು, ಬಿಜೆಪಿಯ ಇಬ್ಬರು ಜೆಡಿಎಸ್ ನ ಓರ್ವ ಅಭ್ಯರ್ಥಿ ಕಣದಲ್ಲಿದ್ದಾರೆ. ಇಂದು ಬೆಳಿಗ್ಗೆ 9 ರಿಂದ 4 ಗಂಟೆವರೆಗೆ ಮತದಾನ ನಡೆದಿದ್ದು ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
Key words: Legislative Council, election, vote counting, One vote, invalid






