ವಿಧಾನಪರಿಷತ್ ಚುನಾವಣೆ; ಬಿಜೆಪಿ ಅಭ್ಯರ್ಥಿ ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ.

ಬೆಂಗಳೂರು,ಆಗಸ್ಟ್,1,2022(www.justkannada.in):  ಸಿಎಂ ಇಬ್ರಾಹಿಂ ರಿಂದ ತೆರವಾಗಿರುವ ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಇಂದು ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ ಸಲ್ಲಿಕೆ ಮಾಡಿದರು.

ವಿಧಾನಸೌಧಕ್ಕೆ ಆಗಮಿಸಿದ ಬಾಬೂರಾವ್ ಚಿಂಚನಸೂರ್, ಈ ಚುನಾವಣೆಯ ಚುನಾವಣಾಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರಿಗೆ ದ್ವಿಪ್ರತಿಗಳಲ್ಲಿ ನಾಮಪತ್ರಗಳನ್ನು ಸಲ್ಲಿಸಿದರು. ನಾಮಪತ್ರ ಸಲ್ಲಿಸುವಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಸಂಸದ ಉಮೇಶ್‌ ಜಾಧವ್‌ ಮತ್ತು ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಅವರು ಬಾಬುರಾವ್‌ ಚಿಂಚನಸೂರು ಅವರ ಜತೆಗಿದ್ದರು.

ಸಿಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಗಸ್ಟ್‌ 11 ರಂದು ಚುನಾವಣೆ ನಡೆಯಲಿದ್ದು,  ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Key words: Legislative -Council –Elections-BJP candidate -Baburao Chinchansur submits- nomination file