ವಿಧಾನಪರಿಷತ್  ಚುನಾವಣೆ: ಬಾಬೂರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್.

ಬೆಂಗಳೂರು,ಜುಲೈ,30,2022(www.justkannada.in):  ಸಿಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಹಗಿರುವ ವಿಧಾನ ಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಿಜೆಪಿ ಅಭ್ಯರ್ಥಿಯಾಗಿ ಬಾಬೂರಾವ್ ಚಿಂಚನಸೂರ್ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.

ಬಾಬೂರಾವ್ ಚಿಂಚನಸೂರ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ. ಬಾಬೂರಾವ್ ಚಿಂಚನಸೂರ್ ಕೋಲಿ ಸಮುದಾಯದವರಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಸಿಎಂ ಇಬ್ರಾಹಿಂ ಕಾಂಗ್ರೆಸ್ ತೊರೆದು ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು.

ಸಿಎಂ ಇಬ್ರಾಹಿಂ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಆಗಸ್ಟ್‌ 11 ರಂದು ಚುನಾವಣೆ ನಡೆಯಲಿದ್ದು, ಆಗಸ್ಟ್‌ 1 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Key words: Legislative- Council –Elections-  BJP -ticket – Baburao Chinchansur.