ಸಂಜೆ ಶಾಸಕಾಂಗ ಪಕ್ಷದ ಸಭೆ: ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಡಿ.ಕೆ ಶಿವಕುಮಾರ್.

ಬೆಂಗಳೂರು,ಮೇ,18,2023(www.justkannada.in): ಸಿಎಂ ಹುದ್ದೆಗೆ ನೆಡದ ಪೈಪೋಟಿಗೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯಗೆ  2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟ ನೀಡಲಾಗಿದೆ. ಹಾಗೆಯೇ ಡಿ.ಕೆ. ಶಿವಕುಮಾರ್ ಅವರಿಗೆ  ಉಪಮುಖ್ಯಮಂತ್ರಿ  ಒಲಿದುಬಂದಿದ್ದು, ಮೇ 20ರಂದು ಮಧ್ಯಾಹ್ನ 12.30ಕ್ಕೆ ಪ್ರಮಾಣವಚನ ಸ್ವೀಕಾರ ಸಮಾರಂಬ ನಡೆಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ನಿನ್ನೆ ನಡುರಾತ್ರಿ ನಡೆದ ಅಂತಿಮ ಬೆಳವಣಿಗೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸರ್ವಾನುಮತದ ನಿರ್ಣಯ ತೆಗೆದುಕೊಂಡಿದ್ದಾರೆ  ಈ ಕುರಿತು ಇಂದು ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಂಜೆ  7 ಗಂಟೆಗೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಹೈಕಮಾಂಡ್ ಯಾವುದೇ ತೀರ್ಮಾನಕ್ಕೆ ನಾನು ಬದ್ಧ. ಹೈಕಮಾಂಡ್ ಹೇಳಿದ್ದಂತೆ ಕೇಳುತ್ತೇನೆ ಎಂದಿದ್ದೇನೆ ಎಂದು ತಿಳಿಸಿದರು.

Key words: Legislative- party -meeting -decision – High Command-  DK Shivakumar.