ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ  15 ಲಕ್ಷ ರೂ. ಪರಿಹಾರ- ಸಿಎಂ ಬೊಮ್ಮಾಯಿ ಘೋಷಣೆ.

ಬೆಂಗಳೂರು,ಡಿಸೆಂಬರ್,3,2022(www.justkannada.in): ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ  15 ಲಕ್ಷ ರೂ. ಪರಿಹಾರ  ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಚಿರತೆ ಹಾವಳಿ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಬೆಂಗಳೂರು ಮೈಸೂರು ಜಿಲ್ಲೆಯಲ್ಲಿ ಚಿರತೆ ಸೆರೆಗೆ ಸೂಚನೆ ನೀಡಲಾಗಿದೆ.  ಚಿರತೆಗಳ ಸೆರೆಗೆ ವಿಶೇಷ ತಂಡ ರಚಿಸಲಾಗಿದೆ. ಚಿರತೆಗಳನ್ನ ಸೆರೆ ಹಿಡಿದು ಕಾಡಿಗೆ ಬಿಡಲು ಸೂಚನೆ ನೀಡಿದ್ದೇವೆ.  ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 15 ಲಕ್ಷರೂ. ಪರಿಹಾರ ಘೋಷಿಸಲಾಗಿದೆ  ಎಂದರು.

ಮೊದಲು ಕಾಡು ಪಕ್ಕದಲ್ಲಿ ಚಿರತೆ ದಾಳಿಯಾಗುತ್ತಿತ್ತು. ಈಗ ಬೆಂಗಳೂರಿನಲ್ಲಿ ಚಿರತೆ ಹಾಳಿಯಾಗಿದೆ ಅದಷ್ಟು ಬೇಗ ಸೆರೆ ಹಿಡಿದು ಕಾಡಿಗೆ ಬಿಡಲು ಕ್ರಮ ವಹಿಸಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

Key words: leopard -attack.- died –  15 lakhs -CM Bommai-announcement.