ಮಂಡ್ಯ,ಜನವರಿ,30,2023(www.justkannada.in): ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.![]()
ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಜಯರಾಮ್ ಚಿರತೆ ದಾಳಿಗೆ ತುತ್ತಾದವರು. ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಜಯರಾಮ್ ಮೇಲೆ ಚಿರತೆ ದಾಳಿ ನಡೆಸಿದ್ದು, ಈ ವೇಳೆ ಜಯರಾಮ್ ಗಂಭೀರ ಗಾಯಗೊಂಡರು.
ನಂತರ ಜಯರಾಮ್ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ರಾಯಸಮುದ್ರ ಗ್ರಾಮದ ಜನರಿಗೆ ಆತಂಕ ಎದುರಾಗಿದೆ.
Key words: Leopard-attack – labor-mandya







