ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ.

ಮಂಡ್ಯ,ಜನವರಿ,30,2023(www.justkannada.in): ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಜಯರಾಮ್ ಚಿರತೆ ದಾಳಿಗೆ ತುತ್ತಾದವರು. ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಜಯರಾಮ್ ಮೇಲೆ ಚಿರತೆ ದಾಳಿ ನಡೆಸಿದ್ದು,  ಈ ವೇಳೆ ಜಯರಾಮ್ ಗಂಭೀರ ಗಾಯಗೊಂಡರು.

ನಂತರ ಜಯರಾಮ್ ಅವರನ್ನ  ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿರತೆ ದಾಳಿ ಹಿನ್ನೆಲೆ ರಾಯಸಮುದ್ರ ಗ್ರಾಮದ ಜನರಿಗೆ ಆತಂಕ ಎದುರಾಗಿದೆ.

Key words:  Leopard-attack – labor-mandya