ಚಿಕ್ಕಮಗಳೂರು,ಜುಲೈ,31,2025 (www.justkannada.in) : ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಏಕಾಏಕಿ ಚಿರತೆ ದಾಳಿ ಮಾಡಿದ ಪರಿಣಾಮ ಇಬ್ಬರು ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಿದ್ದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಿದ್ದರಹಳ್ಳಿ ಗ್ರಾಮದ ಮಂಜುನಾಥ್ (59) ಮೂರ್ತಿ (60) ಗಂಭೀರ ಗಾಯಗೊಂಡವರು. ಗಂಭೀರ ಗಾಯಗೊಂಡ ಇಬ್ಬರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಕಡೂರು ಅರಣ್ಯ ಇಲಾಖೆ, ಸಖರಾಯಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮಂಜುನಾಥ್ ಅವರ ಮೊಮ್ಮಗನ ಶಾಲೆಗೆ ಬಿಡಲು ಬೈಕ್ ನಲ್ಲಿ ಕಡೂರಿಗೆ ತೆರಳುವಾಗ ಚಿರತೆ ದಾಳಿ ನಡೆಸಿದ್ದು ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಚಿರತೆಯನ್ನ ಓಡಿಸಿ ಸವಾರರ ಜೀವ ಉಳಿಸಿದ್ದಾರೆ. ಬೈಕ್ ಸವಾರರಿಬ್ಬರ ಕೈ, ಕಾಲಿಗೆ ಗಂಭೀರ ಗಾಯಗಳಾಗಿದೆ ಎನ್ನಲಾಗಿದೆ. ಸಿದ್ದರಹಳ್ಳಿ, ಮದಗದಕೆರೆ, ಎಮ್ಮೆದೊಡ್ಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
Key words: Leopard, attacks, biker, Serious, injury