ಎಚ್.ಡಿ.ಕುಮಾರಸ್ವಾಮಿ ಕೇವಲ ಆರೋಪದ ಬದಲು ಸರಕಾರದ ವಿರುದ್ಧ ದಾಖಲೆ ಬಿಡುಗಡೆ ಮಾಡಲಿ: ಸಚಿವ ಕೆ.ವೆಂಕಟೇಶ್

ಮೈಸೂರು, ಆಗಸ್ಟ್ 05, 2023 (www.justkannada.in): ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಸರ್ಕಾರದ ವಿರುದ್ಧ ಆರೋಪ ವಿಚಾರ. ಸುಖಾಸುಮ್ಮನೆ ಆರೋಪ ಮಾಡುವುದಲ್ಲ. ಬದಲಿಗೆ ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು.

ಮೈಸೂರಿನಲ್ಲಿ ಮಾತನಾಡಿದ ಸಚಿವರು, ಕುಮಾರಸ್ವಾಮಿಗೆ ಹೊಟ್ಟೆ ಉರಿ ತಡೆದುಕೊಳ್ಳಲು ಆಗುತ್ತಿಲ್ಲ. ಸಮ್ಮಿಶ್ರ ಸರ್ಕಾರ ಬರುತ್ತೇ, ಸಿಎಂ ಆಗ್ತೀನಿ ಅಂತಾ ಕನಸು ಕಾಣ್ತಿದ್ರು.  ಆದರೆ ಅವರ ಆಸೆ ಈಡೇರಲಿಲ್ಲ ಎಂದು ಕುಹಕವಾಡಿದರು.

ಎಚ್ಡಿಕೆ ಕಿಂಗ್ ಮೇಕರ್ ಆಗ್ತೀನಿ, ಸಿಎಂ ಆಗ್ತೀನಿ ಅಂದ್ಕೊಂಡಿದ್ರು. ಆದರೆ ಅವರ ಆಸೆ ಈಡೇರಲಿಲ್ಲ. ಇದೀಗ ಹತಾಶರಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.

ಧರ್ಮಸ್ಥಳದ ಸೌಜನ್ಯ ಹತ್ಯೆ ಪ್ರಕರಣ ಕುರಿತಂತೆ ಪ್ರತಿಕ್ರಿಯಿಸಿ, ಆ ಮೃತ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ನೊಂದ ಕುಟುಂಬಕ್ಕೆ ಪರಿಹಾರ ಸಿಗೆಬೇಕು ಎಂದು ಮೈಸೂರಿನಲ್ಲಿ ಕೆ.ವೆಂಕಟೇಶ್ ತಿಳಿಸಿದರು.