Thursday, August 13, 2026

BDA Apartments

Home Front Page ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಿಸಲಿ- ಡಿಸಿಎಂ ಲಕ್ಷ್ಮಣ್ ಸವದಿ…

ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಿಸಲಿ- ಡಿಸಿಎಂ ಲಕ್ಷ್ಮಣ್ ಸವದಿ…

ಬೆಂಗಳೂರು,ಡಿಸೆಂಬರ್,14,2020(www.justkannada.in):  ಸಾರಿಗೆ ನೌಕರರು ಮುಷ್ಕರ ವಾಪಸ್ ಪಡೆಯುವ ಬಗ್ಗೆ ಮಾಧ್ಯಮಗಳಿಂದ ಮಾಹಿತಿ ತಿಳಿದು ಬಂದಿದೆ. ಹೀಗಾಗಿ ಮುಷ್ಕರ ವಾಪಸ್ ಬಗ್ಗೆ ಅಧಿಕೃತವಾಗಿ ಘೋಷಿಸಲಿ. ಆಮೇಲೆ ಪ್ರತಿಕ್ರಿಯೆ ನೀಡುತ್ತೇನೆ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.logo-justkannada-mysore

ಬೆಂಗಳೂರಿನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ, ಈಗಾಗಲೇ ರಾಜ್ಯದಲ್ಲಿ ಬಸ್ ಸಂಚಾರ ಆರಂಭವಾಗಿದೆ. ಸಾರಿಗೆ ಸಿಬ್ಬಂದಿಯನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಆಗುವುದಿಲ್ಲ ಎಂದು ಆರ್ಥಿಕ ಇಲಾಖೆ ಹೇಳಿದೆ. ಹೀಗಾಗಿ ಸಾರಿಗೆ ಸಿಬ್ಬಂದಿಯನ್ನ ಸರ್ಕಾರಿ ನೌಕರರನ್ನಾಗಿ ಪರಿಗಣಿಸಲು ಸಾಧ್ಯವಿಲ್ಲ.  ಮುಷ್ಕರ ವಾಪಸ್ ಪಡೆಯುವ ಬಗ್ಗೆ ಅಧಿಕೃತ ಘೋಷಣೆ ಮಾಡಲಿ ಎಂದು ಮನವಿ ಮಾಡಿದರು.Let’s- officially -announce - return – strike-DCM- Laxman Savadi.

ನಿನ್ನೆ ಏನೆಲ್ಲಾ ಆಗಿದೆ ಎಂಬುದು ಗೊತ್ತಿದೆ. ನಮಗೂ ಕೋಡಿಹಳ್ಳಿ ಚಂದ್ರಶೇಖರ್ ಗೂ ಸಂಬಂಧ ಇಲ್ಲ.  ಬಸ್ ಸಂಚಾರ ಆರಂಭವಾಗಿದ್ದು ಎಲ್ಲರೂ ಬಂದು ಕೆಲಸ ಮಾಡಿ. ಎಸ್ಮಾ ಜಾರಿ ಮಾಡುವ ಪ್ರಸಂಗ ಬರಲ್ಲ ಎಂದುಕೊಂಡಿದ್ದೇನೆ ಎಂದು ಲಕ್ಷ್ಮಣ್ ಸವದಿ ತಿಳಿಸಿದರು.

Key words: Let’s- officially -announce – return – strike-DCM- Laxman Savadi.