Friday, August 21, 2026

BDA Apartments

Home Front Page ದಯಾಮರಣ ಕೋರಿ ಪೊಲೀಸ್ ಸಿಬ್ಬಂದಿಯಿಂದ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪತ್ರ.

ದಯಾಮರಣ ಕೋರಿ ಪೊಲೀಸ್ ಸಿಬ್ಬಂದಿಯಿಂದ ಸಿಎಂ ಸಿದ್ದರಾಮಯ್ಯ ಮತ್ತು ರಾಷ್ಟ್ರಪತಿಗಳಿಗೆ ಪತ್ರ.

ಬೆಂಗಳೂರು, ಫೆಬ್ರವರಿ 24,2024(www.justkannada.in): ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೇ ಅಂತರ್​ ಜಿಲ್ಲಾ ವರ್ಗಾವಣೆಯಾಗಿಲ್ಲ. ಹೀಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಪೊಲೀಸ್​ ಸಿಬ್ಬಂದಿ ದಯಾಮರಣ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತು ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪತಿ ಒಂದು ಜಿಲ್ಲೆಯಲ್ಲಿ ವಾಸ, ಪತಿ ಒಂದು ಜಿಲ್ಲೆಯಲ್ಲಿ ವಾಸಿಸುತ್ತಿದ್ದಾರೆ. ಇದರಿಂದ ಗಂಡ-ಹೆಂಡತಿ ಜೊತೆಯಲ್ಲಿ ಇರಲು ಸಾಧ್ಯವಾಗುತ್ತಿಲ್ಲ. ವಿಚ್ಛೇದನ ಪ್ರಕರಣ ಕೂಡ ಹೆಚ್ಚುತ್ತಿವೆ. ಕೆಲ ಸಿಬ್ಬಂದಿ ವಯಸ್ಸಾದ ತಂದೆ ತಾಯಿಯನ್ನು ನೋಡಿಕೊಳ್ಳಬೇಕಿದೆ. ಹೀಗಾಗಿ ವರ್ಗಾವಣೆ ಕೋರಿ ಮನವಿ ಮಾಡಿದ್ದಾರೆ.

ಸಿಎಂ ಮತ್ತು ಗೃಹ ಇಲಾಖೆ ಮಂತ್ರಿಗಳು ಬಾಯಿ ಮಾತಿನಲ್ಲಿ ವರ್ಗಾವಣೆ ಮಾಡುತ್ತೇವೆ ಅಂತ ಹೇಳುತ್ತಾರೆ. ಆದರೆ ಅಂತರ ಜಿಲ್ಲಾ ವರ್ಗಾವಣೆ ಲಿಖಿತ ರೂಪದಲ್ಲಿ ಬರುತ್ತಿಲ್ಲ ಎಂದು ರಾಜ್ಯದ ಹಲವು ಠಾಣೆಗಳಲ್ಲಿನ ಸಿಬ್ಬಂದಿಗಳು  ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ನಾವುಗಳು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ನೌಕರಿ ಮಾಡುತ್ತಾ ಹೆತ್ತ ಮಕ್ಕಳ ಲಾಲನೆ ಪಾಲನೆ ಮಾಡದೆ ಜನ್ಮ ಕೊಟ್ಟ ಅಪ್ಪ ಅಮ್ಮ ಇವರ ಪೋಷಣೆ ಮಾಡಲಾಗದೆ ಜೀವನ ನಡೆಸುವಂತಾಗಿದೆ. ನಮಗೆ ವರ್ಗಾವಣೆ ಆಗದೆ ಇರುವುದಕ್ಕೆ ದಾಂಪತ್ಯದಲ್ಲಿ ಬಿರುಕು ಬಿಟ್ಟು ಎಷ್ಟೋ ಸಂಸಾರಗಳು ವಿಚ್ಛೇದನ ಪಡೆಯುವ ಹಂತಕ್ಕೆ ತಲುಪಿವೆ. ಕೆಲವು ವಿಚ್ಛೇದನ ಕೊಟ್ಟಾಗಿದೆ.

ಇನ್ನು ಕೆಲವರಲ್ಲಿ ಪತಿ-ಪತ್ನಿ ಯಾರು ಬೇರೆ ಬೇರೆ ಇರುವುದರಿಂದ ಮದುವೆಯಾಗಿ 5 ವರ್ಷ ಕಳೆದರೂ ಇನ್ನು ಕೂಡ ಮಕ್ಕಳು ಆಗುತ್ತಿಲ್ಲ. ನಮ್ಮದು ಶಿಸ್ತಿನ ಇಲಾಖೆ ಹಾಗಾಗಿ ಬೇರೆ ಇಲಾಖೆಯವರಂತೆ ಪ್ರತಿಭಟನೆ ಮಾಡಲು ಅವಕಾಶ ವಿರುವುದಿಲ್ಲ. ಬೇರೆ ಇಲಾಖೆಯಲ್ಲಿ ಅಂತ‌ರ್ ಜಿಲ್ಲಾ ವರ್ಗಾವಣೆ ನಡೆದಿದೆ. ಆದರೆ ಪೊಲೀಸ್ ಇಲಾಖೆಯಲ್ಲಿ 2021 ರಿಂದ ಯಾವುದೆ ವರ್ಗಾವಣೆ ಆಗಿರುವುದಿಲ್ಲ. ಆದ ಕಾರಣ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವವಹಿಸಲು ಆಗುತ್ತಿಲ್ಲ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ.

ಹೀಗಾಗಿ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೆಕೆಂದು  ನೊಂದ ಮನಸ್ಸಿನಿಂದ ಈ ಮೂಲಕ ಕಳಕಳಿಯಿಂದ ಬೇಡಿಕೊಳ್ಳುತ್ತೆವೆ”. ಎಂದು ಪೊಲೀಸ್​ ಸಿಬ್ಬಂದಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

Key words: Letter – police- personnel -CM Siddaramaiah – President – euthanasia.