ಪಾಕ್, ಚೀನಾ ವಿರುದ್ಧದ ಯುದ್ಧದಲ್ಲಿ ಸೇವೆ ಸಲ್ಲಿಸಿದ್ದ ಲೆಫ್ಟಿನೆಂಟ್ ಜನರಲ್ ವಿ.ಎಂ.ಪಾಟೀಲ್ ನಿಧನ

ಬೆಂಗಳೂರು, ಡಿಸೆಂಬರ್ 11, 2022 (www.justkannada.in): ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದ ವಿ.ಎಂ. ಪಾಟೀಲ್​ ಅವರು ಬೆಂಗಳೂರಿನಲ್ಲಿ ನಿಧನರಾದರು.

ಅತಿ ವಿಶಿಷ್ಟ ಸೇವಾ ಪದಕ ಮತ್ತು ಪರಮ ವಿಶಿಷ್ಟ ಸೇವಾ ಪದಕಗಳಿಂದ ಪುರಸ್ಕೃತರಾಗಿದ್ದ ವಿ.ಎಂ. ಪಾಟೀಲ್​ ಅವರಿಗೆ 84 ವರ್ಷ ವಯಸ್ಸಾಗಿತ್ತು.

1962ರ ಭಾರತ-ಚೀನಾ ಯುದ್ಧ ಮತ್ತು 1965ರ ಭಾರತ-ಪಾಕಿಸ್ತಾನದ ಯುದ್ಧದ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಈ ಎರಡೂ ಯುದ್ಧಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ವಿಯೆಟ್ನಾಂ, ಲಾವೋಸ್, ಕಾಂಬೋಡಿಯಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಗಳಲ್ಲಿ ಮೊದಲ ರಕ್ಷಣಾ ಸಲಹೆಗಾರರಾಗಿದ್ದರು.